ಮಂಗಳೂರಿನಲ್ಲಿ ಜನವರಿ 21ರಂದು ನಿಗಧಿಯಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮುಂದೂಡಿಕೆ
ಬೆಂಗಳೂರು: ಜನವರಿ 21ರಂದು ಮಂಗಳೂರಿನಲ್ಲಿ ನಿಗಧಿ ಮಾಡಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದ್ದು, ಸಮಾವೇಶದ ಮುಂದಿನ ದಿನಾಂಕವನ್ನು ಶೀಘ್ರದಲ್ಲಿದಲ್ಲಿಯೇ ತಿಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ ಪ್ರಕಟನೆ ಹೊರಡಿಸಿರುವ ಅವರು, ಜ. 21ರಂದು ಮಂಗಳೂರು ನಗರದಲ್ಲಿ ಆಯೋಜಿಸಲಾಗಿದ್ದ ಸಮಾವೇಶವನ್ನು ಮುಂದೂಡಿದ್ದು, ಶೀಘ್ರದಲ್ಲಿದಲ್ಲಿಯೇ ಹೊಸ ದಿನಾಂಕವನ್ನು ತಿಳಿಸಲಾಗುವುದು. ಈ ಹಿನ್ನೆಲೆಯಲ್ಲಿ ಸಮಾವೇಶ ನಡೆಸಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕಾರ್ಯಕ್ರಮವನ್ನು ಹಾಗೇಯೇ ಮುಂದುವರಿಸಲು ವಿನಂತಿಸಿಕೊಂಡಿದ್ದಾರೆ.
Next Story