ಕೇಂದ್ರ ಸರಕಾರ ಅಕ್ಕಿ ನೀಡಲು ಮಂದಾದರೂ, ಸಿಎಂ ಬಳಿ ಖರೀದಿಗೆ ಹಣವಿಲ್ಲ : ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ಕೇಂದ್ರ ಸರಕಾರ ಅಕ್ಕಿ ನೀಡಲು ಮಂದಾದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಖರೀದಿಗೆ ಹಣವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ. ಕಳೆದ ಬಾರಿ ನಮ್ಮ ಬಳಿ ಅಕ್ಕಿ ದಾಸ್ತಾನು ಇರಲಿಲ್ಲ. ಹೀಗಾಗಿ, ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿ ನಿಲ್ಲಿಸಲಾಗಿತ್ತು. ಇದೀಗ 330 ಲಕ್ಷ ಟನ್ ಅಕ್ಕಿ ಲಭ್ಯವಿದ್ದು, ಮುಕ್ತ ಮಾರುಕಟ್ಟೆಯಲ್ಲಿ ಖರೀದಿಗೆ ಅವಕಾಶ ನೀಡಿದ್ದೇವೆ ಎಂದರು.
ಅಕ್ಕಿ ದರ ಕೆ.ಜಿ.ಗೆ 34 ರೂ.ಯಿಂದ 28 ರೂ.ಗೆ ಇಳಿಸಿದ್ದೇವೆ. ಯಾವುದೇ ರಾಜ್ಯ ಸರಕಾರಗಳು ಬೇಕಿದ್ದರೂ ಖರೀದಿಸಬಹುದು. ಇನ್ನೊಂದೆಡೆ, ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ. ಅನೇಕ ಕಾಂಗ್ರೆಸ್ ಶಾಸಕರು ಕೇಂದ್ರದ ಬಳಿ ಅನುದಾನ ಕೊಡಿಸಬೇಕೆಂದು ದುಂಬಾಲು ಬಿದ್ದಿದ್ದಾರೆ ಎಂದು ಆರೋಪಿಸಿದರು.
Next Story