ಸುಪ್ರೀಂಗೆ ಅರ್ಜಿ ಸಲ್ಲಿಸುವವರೆಗೆ ಅಸಿಂಧು ಆದೇಶಕ್ಕೆ ತಡೆ ಕೋರಿ ಹೈಕೋರ್ಟ್‍ಗೆ ಪ್ರಜ್ವಲ್ ರೇವಣ್ಣ ಮನವಿ
ಬೆಂಗಳೂರು, ಸೆ.4: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನದಿಂದ ಅಸಿಂಧುಗೊಳಿಸಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಕೆ ಮಾಡಬೇಕಾಗಿದ್ದು, ಅಲ್ಲಿಯವರೆಗೆ ಅಸಿಂಧು ತೀರ್ಪಿಗೆ ತಡೆ ನೀಡಬೇಕು ಎಂದು ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್‍ಗೆ ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿ ಇನ್ನಷ್ಟೇ ಹೈಕೋರ್ಟ್‍ನಲ್ಲಿ ವಿಚಾರಣೆಗೆ ಬರಬೇಕಿದೆ. ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಎ.ಮಂಜು ಮತ್ತು ವಕೀಲ ದೇವರಾಜೇಗೌಡ ಎಂಬುವರು ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ನೇತೃತ್ವದ ಪೀಠ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶಿಸಿತ್ತು.
Next Story