ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ : ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಿದ ಸರ್ಕಾರ
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರನ್ನು ನೇಮಿಸಿದೆ.
ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ವಾದಿಸಲು ವಿಶೇಷ ಅಭಿಯೋಜಕರನ್ನಾಗಿ(ಎಸ್ಪಿಪಿ) ಎನ್.ಜಗದೀಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಎ.30 ಆದೇಶ ಹೊರಡಿಸಿದೆ.
ಹಾಸನ ಸಂಸದ ಪ್ರಜ್ವಲ್ ಹಾಗೂಎ ಚ್.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದ್ದು, ಎಸ್ಐಟಿ ತಂಡ ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ
Next Story