ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ
ಮೈಸೂರು : ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೊಳಗಾಗಿದ್ದ ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ಎಸ್.ಐ.ಟಿ. ಪೊಲೀಸರು ರಕ್ಷಣೆ ಮಾಡಿದ್ದಾರೆ.
ಎಚ್.ಡಿ.ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಕೆ.ಆರ್.ನಗರದ ಮಹಿಳೆಯೋರ್ವರರನ್ನು ಎ.29 ರಂದು ರೇವಣ್ಣ ಅವರ ಸೂಚನೆ ಮೇರೆಗೆ ಸತೀಶ್ ಬಾಬು ಎಂಬುವವರು ಅಪಹರಿಸಿದ್ದರು ಎಂದು ಮಹಿಳೆಯ ಪುತ್ರ ರಾಜು ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ವಿಚಾರವಾಗಿ ತನಿಖೆ ಕೈಗೊಂಡ ಎಸ್‌ಐಟಿ ತಂಡ ಮಹಿಳೆಯನ್ನು ಹುಣಸೂರು ತಾಲ್ಲೂಕಿನ ಕಾಳೇನಹಳ್ಳಿ ಬಳಿ ಪತ್ತೆ ಹಚ್ಚಿ ಅವರನ್ನು ರಕ್ಷಿಸಿದ್ದಾರೆ.
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಮನೆ ಕೆಲಸದ ಮಹಿಳೆ ಮೇಲೂ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಆಕೆಯ ಪುತ್ರ ದೂರಿನಲ್ಲಿ ಉಲ್ಲೇಖಿಸಿದ್ದರು.
ಈ ಸಂಬಂಧ ಎರಡನೇ ಆರೋಪಿ ಸತೀಶ್ ಬಾಬು ಅವರನ್ನು ಮೇ.2 ರಂದು ಪೊಲೀಸರು ಬಂಧಿಸಿದ್ದರು. ಅಲ್ಲದೆ, ಮೇ.3 ರಂದು ಕೆ.ಆರ್.ನಗರ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಧೀಶರು 14 ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.