Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಮಾನವ-ಆನೆ ಸಂಘರ್ಷ’ ತಗ್ಗಿಸಲು ವರ್ಷಕ್ಕೆ...

‘ಮಾನವ-ಆನೆ ಸಂಘರ್ಷ’ ತಗ್ಗಿಸಲು ವರ್ಷಕ್ಕೆ 150 ಕೋಟಿ ರೂ.ಮೀಸಲು: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ12 Aug 2024 9:10 PM IST
share
‘ಮಾನವ-ಆನೆ ಸಂಘರ್ಷ’ ತಗ್ಗಿಸಲು ವರ್ಷಕ್ಕೆ 150 ಕೋಟಿ ರೂ.ಮೀಸಲು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹತ್ತು ವರ್ಷಗಳಿಂದ ಮಾನವ-ಆನೆ ಸಂಘರ್ಷದ ಕುರಿತಾಗಿ 2,500ಕ್ಕೂ ಹೆಚ್ಚು ಘಟನೆಗಳು ವರದಿಯಾಗಿದ್ದು, 350ಕ್ಕೂ ಹೆಚ್ಚು ಸಾವು ಸಂಭವಿಸಿದೆ. ಹೀಗಾಗಿ ಮಾನವ-ಆನೆ ಸಂಘರ್ಷ ತಗ್ಗಿಸಲು ರಾಜ್ಯ ಸರಕಾರ ವಾರ್ಷಿಕ 150 ಕೋಟಿ ರೂ.ವೆಚ್ಚ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ಇಲ್ಲಿನ ಜಿಕೆವಿಕೆ ಆವರಣದಲ್ಲಿ ಅರಣ್ಯ ಇಲಾಖೆಯು ವಿಶ್ವ ಆನೆ ದಿನದ ಅಂಗವಾಗಿ ಆಯೋಜಿಸಿದ್ದ ‘ಆನೆ-ಮಾನವ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ’ ಉದ್ಘಾಟಿಸಿ ಮಾತನಾಡಿದ ಅವರು, ಈ ವರ್ಷದ ಅನುದಾನದಲ್ಲಿ 300ಕಿ.ಮೀ.ಗಿಂತಲೂ ಹೆಚ್ಚು ರೈಲ್ವೆ ಬ್ಯಾರಿಕೇಡ್‍ಗಳು, 800ಕಿ.ಮೀ.ಗಳಷ್ಟು ವ್ಯಾಪಿಸಿರುವ ಸೌರಬೇಲಿ, ಟೆಂಟಕಲ್ ಬೇಲಿ ಮತ್ತು ಆನೆ ತಡೆ ಕಂದಕಗಳನ್ನು ನಿರ್ಮಿಸಲಾಗುತ್ತಿದೆ ಎಂದರು.

ಆನೆ-ಮಾನವ ಸಂಘರ್ಷ ಸಮಸ್ಯೆಯು ನಮ್ಮ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ಗಣನೀಯ ಆನೆಗಳ ಜನಸಂಖ್ಯೆಯನ್ನು ಹೊಂದಿರುವ ಬಹುತೇಕ ಎಲ್ಲ ಪ್ರದೇಶಗಳೂ ಈ ಸಮಸ್ಯೆಯನ್ನು ಎದುರಿಸುತ್ತಿವೆ. ಇಂದಿನ ಚರ್ಚೆಗಳು ನಾವು ಈ ಸಂಘರ್ಷಗಳನ್ನು ಪರಿಣಾಮಕಾರಿಯಾಗಿ ಮತ್ತು ಸಮರ್ಥನೀಯವಾಗಿ ಹೇಗೆ ಪರಿಹರಿಸಬಹುದು ಎಂಬುದರ ಮೇಲೆ ಕೇಂದ್ರೀಕರಿಸುತ್ತವೆ ಎಂದು ಅವರು ತಿಳಿಸಿದರು.

ರಾಜ್ಯವು ಮೈಸೂರು ಆನೆ ಮೀಸಲು ಪ್ರದೇಶ ಮತ್ತು ದಾಂಡೇಲಿ ಆನೆ ಮೀಸಲು ಪ್ರದೇಶ ಎಂಬ ಎರಡು ಆನೆ ಮೀಸಲು ಪ್ರದೇಶಗಳನ್ನು ಹೊಂದಿದೆ. ಈ ಮೀಸಲು ಪ್ರದೇಶಗಳು 10ಸಾವಿರ ಚದರ ಕಿ.ಮೀ.ಗಿಂತಲೂ ಹೆಚ್ಚು ಪ್ರದೇಶವನ್ನು ಆವರಿಸಿವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

2017ರ ಜನಗಣತಿಯ ಪ್ರಕಾರ ಸುಮಾರು 30ಸಾವಿರ ಆನೆಗಳು ನಮ್ಮ ದೇಶದಲ್ಲಿದ್ದು, ಇದು ಜಾಗತಿಕವಾಗಿ ಅತಿದೊಡ್ಡ ಸಂಖ್ಯೆಯಾಗಿದೆ. ಕರ್ನಾಟಕದಲ್ಲಿ 6,395ಆನೆಗಳಿದ್ದು, ದೇಶದಲ್ಲೇ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯವಾಗಿದೆ, ಇದು ರಾಷ್ಟ್ರದ ಒಟ್ಟು ಆನೆಗಳ ಸಂಖ್ಯೆಯ ಸರಿಸುಮಾರು ಶೇ.25 ರಷ್ಟಿದೆ ಎಂದು ಅವರು ತಿಳಿಸಿದರು.

ಸೌರ ಬೇಲಿಗಳನ್ನು ನಿರ್ಮಿಸಲು ಸಂಪನ್ಮೂಲಗಳು ಮತ್ತು ಸಬ್ಸಿಡಿಗಳನ್ನು ಒದಗಿಸುವ ಮೂಲಕ ರೈತರನ್ನು ಸಬಲೀಕರಣಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಯೋಜನೆಗಳು 50ಸಾವಿರ ಹೆಕ್ಟೇರ್‍ಗಿಂತಲೂ ಹೆಚ್ಚು ಕೃಷಿಭೂಮಿಯನ್ನು ಸಂರಕ್ಷಣೆ, ರೈತರ ಜೀವನೋಪಾಯದ ರಕ್ಷಣೆ ಮತ್ತು ಮಾನವಮತ್ತು ವನ್ಯಜೀವಿಗಳ ನಡುವೆ ಸಹಬಾಳ್ವೆಯನ್ನು ಪ್ರೋತ್ಸಾಹಿಸಲು ಸಹಾಯ ಮಾಡಿದೆ ಎಂದು ಅವರು ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ನಾನು ಪ್ರತಿನಿಧಿಸುವ ಕ್ಷೇತ್ರದಲ್ಲೂ ಮಾನವ-ಆನೆ ಸಂಘರ್ಷ ಪ್ರಕರಣಗಳಿವೆ. ಒಂದು ವರ್ಷದಲ್ಲಿ ಆನೆ ದಾಳಿಗೆ 18 ಮಂದಿ ಸಾವನ್ನಪ್ಪಿದ್ದಾರೆ. ಹೀಗಾಗಿ ಈ ಸಮಸ್ಯೆಗಳ ಬಗ್ಗೆ ನನಗೆ ಅರಿವಿದೆ. ಈ ಸಮ್ಮೇಳನದಲ್ಲಿ ನೀವು ಈ ಸಂಘರ್ಷದಲ್ಲಿ ಯಾವುದೇ ಮಾನವನ ಜೀವಕ್ಕೆ ಹಾನಿಯಾಗದಂತೆ ಕ್ರಮ ವಹಿಸುವ ಬಗ್ಗೆ ಚರ್ಚೆ ಮಾಡಬೇಕು ಎಂದರು.

ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯ ರೈತರ ಜತೆ ಉತ್ತಮ ಸಂಬಂಧ ಬೆಳೆಸಿಕೊಳ್ಳಬೇಕು. ಕೇವಲ ಅರಣ್ಯ ಸಿಬ್ಬಂದಿಗಳಿಂದ ಇಡೀ ಅರಣ್ಯ ಪ್ರದೇಶ ಸಂರಕ್ಷಣೆ ಸಾಧ್ಯವಿಲ್ಲ. ಆನೆಗಳ ಜತೆಗೆ ಇತರೆ ಕಾಡು ಪ್ರಾಣಿಗಳನ್ನು ನಿರ್ವಹಣೆ ಮಾಡಬೇಕು. ಹೀಗಾಗಿ ಸಮುದಾಯಗಳ ಜತೆ ಉತ್ತಮ ಸಂಬಂಧ ಹೊಂದುವುದು ಮುಖ್ಯವಾಗುತ್ತದೆ. ಯಾವುದೇ ಕಾರಣಕ್ಕೂ ರೈತರಿಗೆ ಕಿರುಕುಳ ನೀಡಬಾರದು ಎಂದು ಅವರು ತಿಳಿಸಿದರು.

ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಮಾತನಾಡಿ, ಮಾನವ-ವನ್ಯಜೀವಿ ಸಂಘರ್ಷದ ಸಮಸ್ಯೆಯನ್ನು ಪರಿಹರಿಸುವುದು ಸರಕಾರದ ಪ್ರಥಮ ಆದ್ಯತೆಯಾಗಿದೆ. ಜನರ ಮತ್ತು ವನ್ಯಜೀವಿಗಳ ಸುರಕ್ಷತೆ ಖಾತ್ರಿಪಡಿಸಲು ತಮ್ಮ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದರು.

ತಂತ್ರಜ್ಞಾನದ ಅಳವಡಿಕೆ ಮತ್ತು ಸಮುದಾಯ-ಚಾಲಿತ ಉಪಕ್ರಮಗಳೊಂದಿಗೆ ಆನೆಗಳು ನಾಡಿಗೆ ಬಂದು ಹಾನಿ ಮಾಡುವುದನ್ನು ನಿಯಂತ್ರಿಸಲು ರಾಜ್ಯ ಸರಕಾರವು ಶ್ರಮಿಸುತ್ತಿದ್ದು, ಈ ಸವಾಲು ಎದುರಿಸುವಲ್ಲಿ ಮುಂಚೂಣಿಯಲ್ಲಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ಜಾರ್ಖಂಡ್ ನ ಅರಣ್ಯ ಸಚಿವ ಬೈದ್ಯನಾಥ್ ರಾಮ್, ತಮಿಳುನಾಡು ಅರಣ್ಯ ಸಚಿವ ಎಂ.ಮಥಿವೆಂಥನ್, ತೆಲಂಗಾಣ ಅರಣ್ಯ ಸಚಿವೆ ಕೊಂಡ ಸುರೇಖಾ, ಕೇರಳ ಅರಣ್ಯ ಸಚಿವ ಸಸೀಂದ್ರನ್ ಪಾಲ್ಗೊಂಡಿದ್ದರು.

‘ಮಾನವ-ಆನೆ ಸಂಘರ್ಷ ತಡೆಗೆ ಅರಣ್ಯ, ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಸ್ಥಳೀಯರ ಸಹಕಾರ ಅಗತ್ಯ. ಅಲ್ಲದೆ, ಈ ಸಮ್ಮೇಳನವು ಪರಸ್ಪರ ಕಲಿಯಲು, ವೈಜ್ಞಾನಿಕ ಪರಿಹಾರಗಳನ್ನು ಅನ್ವೇಷಿಸಲು ಮತ್ತು ಮನುಷ್ಯ-ಆನೆಗಳ ನಡುವೆ ಸಹಬಾಳ್ವೆಯನ್ನು ಬೆಳೆಸಲು ಸೂಕ್ತ ವಿಧಾನಗಳನ್ನು ಚರ್ಚಿಸಬೇಕು. ಮಾನವ-ಆನೆಗಳ ನಡುವೆ ಸಾಮರಸ್ಯದ ಸಹಬಾಳ್ವೆಗೆ ದಾರಿ ಮಾಡಿಕೊಡಲು ಪ್ರಮುಖ ಒಳನೋಟಗಳು ಮತ್ತು ಶಿಫಾರಸುಗಳನ್ನು ವಿಷಯ ತಜ್ಞರು ನೀಡುತ್ತಾರೆಂದು ವಿಶ್ವಾಸವಿದೆ. ಒಟ್ಟಾಗಿ, ಜನರು ಮತ್ತು ವನ್ಯಜೀವಿಗಳ ಸುರಕ್ಷತೆ, ಯೋಗಕ್ಷೇಮ ಮತ್ತು ಸಮೃದ್ಧಿಯನ್ನು ನಾವು ಖಚಿತಪಡಿಸಿಕೊಳ್ಳಬೇಕಿದೆ’

-ಸಿದ್ದರಾಮಯ್ಯ, ಮುಖ್ಯಮಂತ್ರಿ








share
ವಾರ್ತಾಭಾರತಿ
ವಾರ್ತಾಭಾರತಿ
Next Story
X