Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು...

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಕದ್ದು ಪ್ರಧಾನಿ ಮೋದಿ ಚುನಾವಣೆ ಎದುರಿಸುತ್ತಿದ್ದಾರೆ: ಡಿಕೆಶಿ ಆರೋಪ

"ಡಿಸೆಂಬರ್ ನಲ್ಲಿ ಐದನೇ ಗ್ಯಾರಂಟಿ ಯುವನಿಧಿ ಜಾರಿಗೆ"

ವಾರ್ತಾಭಾರತಿವಾರ್ತಾಭಾರತಿ19 Nov 2023 2:58 PM IST
share
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಕದ್ದು ಪ್ರಧಾನಿ ಮೋದಿ ಚುನಾವಣೆ ಎದುರಿಸುತ್ತಿದ್ದಾರೆ: ಡಿಕೆಶಿ ಆರೋಪ

ಬೆಂಗಳೂರು, ನ.19: "ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಕದ್ದು ಪಂಚರಾಜ್ಯಗಳ ಚುನಾವಣೆ ಎದುರಿಸುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆ ಮತ್ತು ಬೆಂಗಳೂರು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ದಳಕ್ಕೆ ಮತ ಹಾಕಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ವಾಪಸ್ ತೆಗದುಕೊಳ್ಳುವಂತಹ ಕಾನೂನು ತರುತ್ತಾರೆ. ಈ ವಿಚಾರಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಬಿಜೆಪಿ ಮತ್ತು ದಳದವರು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು. ಅವರ ಈ ಜನವಿರೋಧಿ ಬುದ್ಧಿಯನ್ನು ಮತದಾರರಿಗೆ ತಿಳಿಸುವ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲುಸುವುದಾಗಲಿ, ಕಡಿಮೆ ಮಾಡುವುದಾಗಲಿ ಯಾವುದನ್ನೂ ಸಹ ಕಾಂಗ್ರೆಸ್ ಸರ್ಕಾರ ಮಾಡುವುದಿಲ್ಲ ಎಂದವರು ಸ್ಪಷ್ಟಪಡಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಇಲ್ಲವೇ ಎಂದು ಖುದ್ದಾಗಿ ತಿಳಿಯಲು ಸಚಿವರುಗಳಿಗೆ ಸೂಚನೆ ನೀಡಲಾಗಿದೆ. ನ.28ರಂದು ಕಾಂಗ್ರೆಸ್ ಸಂಸ್ಥಾಪಕರ ದಿನ. ಈ ದಿನದಂದೇ ಪಕ್ಷದ ವತಿಯಿಂದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಎಂದು ಸಮೀಕ್ಷೆ ಮಾಡಲು ಸಮಿತಿ ರಚನೆ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ಯಡಿಯೂರಪ್ಪರನ್ನು ಭೇಟಿ ಮಾಡಲು ಹೋದ ವೇಳೆ ಅವರು ʼಡಿ.ಕೆ. ಈ ವರ್ಷ ಎರಡು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತನ್ನಿ, ಸಾಕು ಎಂದಿದ್ದರುʼ. ನಾನು ಆಯಿತು ಸಾರ್ ಎಂದು ನಕ್ಕು ಹೊರಬಂದಿದ್ದೆ. ಆದರೆ ಮೊದಲನೇ ಕ್ಯಾಬಿನೆಟ್ ಸಭೆಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದೆವು. ಡಿಸೆಂಬರ್ ತಿಂಗಳಿನಲ್ಲಿ ಐದನೇ ಗ್ಯಾರಂಟಿ ಯುವನಿಧಿ ಜಾರಿಗೆ ತರಲಾಗುವುದು ಎಂದು ಡಿಕೆಶಿ ಹೇಳಿದರು.

ದೇಶಕ್ಕೆ ಗ್ಯಾರಂಟಿ ಯೋಜನೆಗಳನ್ನು ಮೊದಲು ನೀಡಿದ ಪ್ರಧಾನಿ ಇಂದಿರಾ ಗಾಂಧಿ

ಈ ದೇಶಕ್ಕೆ ಗ್ಯಾರಂಟಿ ಯೋಜನೆಗಳನ್ನು ಮೊದಲು ಕೊಟ್ಟವರು ಇಂದಿರಾ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ. ಬ್ಯಾಂಕ್ಗಳ ರಾಷ್ಟ್ರೀಕರಣವಾದ ಮೇಲೆ ಜನರ ಮನೆ ಬಾಗಿಲಿಗೆ ಬಂದು ಸಾಲ ಕೊಡುವ ವ್ಯವಸ್ಥೆ ಬಂದಿದ್ದೇ ಇಂದಿರಾ ಗಾಂಧಿ ಅವರ ಕ್ರಾಂತಿಕಾರಕ ನಿರ್ಧಾರದಿಂದ. ಅಂಗನವಾಡಿಯಲ್ಲಿ ಬಿಸಿಯೂಟ ಸೇರಿದಂತೆ ಸಾವಿರಾರು ಜನಪರ ಯೋಜನೆಗಳು ಜಾರಿಗೆ ಬಂದಿದ್ದೇ ಇಂದಿರಾ ಗಾಂಧಿ ಅವರ ಕಾಲದಲ್ಲಿ ಎಂದು ಡಿಕೆಶಿ ಸ್ಮರಿಸಿದರು.

ನಾನು ಮೊದಲ ಬಾರಿಗೆ ಬೈಕ್ ತೆಗದುಕೊಳ್ಳಲು ಲಾಲ್ ಬಾಗ್ ಬಳಿ ಇರುವ ಲೇವಾದೇವಿಗಾರರ ಬಳಿ 3 ಸಾವಿರ ರೂ. ಸಾಲ ಪಡೆದು ತಿಂಗಳಿಗೆ 500 ರೂ. ಕಟ್ಟುತ್ತಿದ್ದೆ. ಆಗ ಬ್ಯಾಂಕ್ ಗಳಲ್ಲಿ ಜನಸಾಮಾನ್ಯರಿಗೆ ಸಾಲ ಕೊಡುವ ವ್ಯವಸ್ಥೆ ಇರಲಿಲ್ಲ. ಬ್ಯಾಂಕ್ಗಳ ರಾಷ್ಟ್ರೀಕರಣದಿಂದ ಲಕ್ಷಾಂತರ ಜನರ ಬದುಕಿನಲ್ಲಿ ಬದಲಾವಣೆ ಉಂಟಾಯಿತು ಎಂದವರು ನುಡಿದರು.

ಶಕ್ತಿ ಯೋಜನೆಯ ಪರಿಣಾಮ ಮೈಸೂರು ದಸರಾಗೆ ಲಕ್ಷಾಂತರ ಹೆಣ್ಣುಮಕ್ಕಳು ಭಾಗವಹಿಸಿದ್ದರು. ಹಾಸನಾಂಭ ದೇವರ ದರ್ಶನದ ಟಿಕೆಟ್ ನಿಂದ 8 ಕೋಟಿಗೂ ಹೆಚ್ಚು ಹಣ ಸಂಗ್ರಹವಾಗಿದೆ. ಹಣದ ಚಲಾವಣೆ ಹೆಚ್ಚಾಗಿದ್ದು, ಹೋಟೆಲ್, ರೂಮು, ಜಾತ್ರೆಯ ವ್ಯಾಪಾರಿಗಳ ವಹಿವಾಟು ಹೆಚ್ಚಳವಾಗಿದೆ. ಶಕ್ತಿ ಯೋಜನೆಯ ಪರಿಣಾಮ 100 ಕೋಟಿ ಟ್ರಿಪ್ಗಳನ್ನು ಉಚಿತವಾಗಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ ಎಂದವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X