Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಾಕ್‌ ಪರ ಘೋಷಣೆ ಆರೋಪ ಪ್ರಕರಣ ; ಮೂವರ...

ಪಾಕ್‌ ಪರ ಘೋಷಣೆ ಆರೋಪ ಪ್ರಕರಣ ; ಮೂವರ ಬಂಧನ

ವಾರ್ತಾಭಾರತಿವಾರ್ತಾಭಾರತಿ4 March 2024 6:30 PM IST
share
ಪಾಕ್‌ ಪರ ಘೋಷಣೆ ಆರೋಪ ಪ್ರಕರಣ ; ಮೂವರ ಬಂಧನ

ಬೆಂಗಳೂರು ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ವಿಧಾನಸೌಧ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಹೊಸದಿಲ್ಲಿಯ ಮೂಲದ ಇಲ್ತಾಝ್, ಆರ್.ಟಿ.ನಗರದ ನಿವಾಸಿ ಮುನವ್ವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮುಹಮ್ಮದ್ ಶಫಿ ನಾಶಿಪುಡಿ ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಫೆ.27ರಂದು ರಾಜ್ಯಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ನಾಸಿರ್ ಹುಸೇನ್ ಪರವಾಗಿ ಬಂಧಿತ ಆರೋಪಿಗಳು ಪಾಸ್ ಮೂಲಕ ವಿಧಾನಸೌಧಕ್ಕೆ ಆಗಮಿಸಿದ್ದರು. ಸಂಜೆ 6ಗಂಟೆಯ ವೇಳೆಗೆ ನಾಸಿರ್ ಹುಸೇನ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ ಘೋಷಣೆ ಕೂಗಿದ್ದರು. ಈ ಸಂದರ್ಭದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೊವೊಂದು ವೈರಲ್ ಆಗಿತ್ತು.

ಅನಂತರ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಿ, ವಿಡಿಯೊ ಮಾದರಿಯನ್ನು ಎಫ್‍ಎಸ್‍ಎಲ್‍ಗೆ ರವಾನಿಸಲಾಗಿತ್ತು, ಮೇಲ್ನೋಟಕ್ಕೆ ವರದಿಯಲ್ಲಿ ಘೋಷಣೆ ಕೂಗಿರುವುದು ದೃಢವಾಗಿರುವ ಹಿನ್ನೆಲೆ ಸೋಮವಾರ ಸಂಜೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದರು.

ಬಳಿಕ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿ ಇಲ್ಲಿನ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಸಾಕ್ಷ್ಯಗಳ ಆಧಾರದ ಮೇಲೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಘೋಷಣೆ ವೀಡಿಯೊ ತೀವ್ರ ಸ್ವರೂಪ ಪಡೆದುಕೊಂಡಿದ್ದ ಹಿನ್ನೆಲೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಘೋಷಣೆ ಕೂಗಿದ ಆರೋಪದಡಿ 26 ಮಂದಿಯ ಪಟ್ಟಿಯನ್ನ ಸಿದ್ದಪಡಿಸಲಾಗಿತ್ತು. ಇದರಲ್ಲಿ 7 ಮಂದಿ ವಿಚಾರಣೆ ಮಾಡಿ ಮೂವರ ಧ್ವನಿ ಮಾದರಿಗಳನ್ನು ಎಫ್‍ಎಸ್‍ಎಲ್‍ಗೆ ರವಾನೆ ಮಾಡಲಾಗಿತ್ತು. ಆನಂತರ, ದೃಢಪಟ್ಟ ಹಿನ್ನೆಲೆ ಮೂವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X