ಶಾಲಾ - ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಮಧು ಬಂಗಾರಪ್ಪ
ಸಾಂದರ್ಭಿಕ ಚಿತ್ರ
ಬೆಂಗಳೂರು: ಅನುದಾನಿತ ಶಾಲಾ ಕಾಲೇಜುಗಳಲ್ಲಿ ನಿವೃತ್ತಿ, ರಾಜಿನಾಮೆ ಹಾಗೂ ಇನ್ನಿತರೆ ಕಾರಣಗಳಿಂದ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಅನುದಾನಿತ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ರಾಜೀನಾಮೆ, ಮರಣ ಹಾಗೂ ಇನ್ನಿತರೆ ಕಾರಣಗಳಿಂದ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿದೆ.
ಅನುದಾನಿತ ಶಾಲಾ-ಕಾಲೇಜುಗಳ ಸಿಬ್ಬಂದಿಗಳು ಸರಕಾರಿ ನೌಕರರ ನಿಯಮಗಳ ಒಳಪಡುವುದಿಲ್ಲ. ಆದುದರಿಂದ ಅವರಿಗೆ ಆರೋಗ್ಯ ಸಂಜೀವಿನಿ ಯೋಜನೆಗೆ ನಗದು ರಹಿತ ಚಿಕಿತ್ಸಾ ವ್ಯಾಪ್ತಿಗೆ ಬರುವುದಿಲ್ಲ. ಅದಾಗ್ಯೂ ಈ ಸಂಬಂಧ ಸಿಎಂ ಜತೆ ಚರ್ಚಿಸಿ, ಸಿಬ್ಬಂದಿ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಮದು ಅವರು ತಿಳಿಸಿದರು.
Next Story