ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ ಮಂಡನೆ
ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.11: 2023ನೇ ಸಾಲಿನ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಂಡನೆ ಮಾಡಿದರು.
ನ್ಯಾಯವಾದಿಗಳ ಮೇಲೆ ಹಲ್ಲೆ , ಹಿಂಸಾಚಾರ ಮಾಡುವವರಿಗೆ ಆರು ತಿಂಗಳಿನಿಂದ ಮೂರು ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ.ರೂ ವರೆಗೆ ದಂಡ ವಿಧಿಸುವುದಕ್ಕೆ ಅವಕಾಶ ಕಲ್ಪಿಸುವ ‘ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಮಸೂದೆ– 2023’ ಅನ್ನು ಸೋಮವಾರ ಸದನದಲ್ಲಿ ಮಂಡಿಸಲಾಯಿತು.
Next Story