ಸಿಎಂ ವಿರುದ್ಧ ಪ್ರಾಸಿಕ್ಯೂಷನ್ | ರಾಜ್ಯ ಸರಕಾರವನ್ನು ದುರ್ಬಲಗೊಳಿಸಲು ಕೇಂದ್ರದಿಂದ ಸಂಘಟಿತ ಯತ್ನ : ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ/ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್
ಬೆಂಗಳೂರು : ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ನೀಡಿರುವ ರಾಜ್ಯಪಾಲರ ಕ್ರಮವನ್ನು ಟೀಕಿಸಿರುವ ಸಚಿವರು, "ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟುಹಾಕುತ್ತಿದ್ದಾರೆ" ಎಂದಿದ್ದಾರೆ.
ಕೇಂದ್ರ ಸರಕಾರ ತನ್ನ ಎಷ್ಟೇ ಶಕ್ತಿಯನ್ನು ಪ್ರಯೋಗಿಸಿದರೂ, ನಾವು ನಮ್ಮ ಪರವಾಗಿ ಸಂವಿಧಾನದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದೂ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.
Next Story