Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಚೋದನಾಕಾರಿ ಭಾಷಣ ಮಾಡುವವರನ್ನು ಒದ್ದು...

ಪ್ರಚೋದನಾಕಾರಿ ಭಾಷಣ ಮಾಡುವವರನ್ನು ಒದ್ದು ಒಳಗೆ ಹಾಕುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

► ʼʼಸಂವಿಧಾನ ಉಲ್ಲಂಘನೆ ಮಾಡಿದವರಿಗೆ ಜೈಲೂಟ ಖಚಿತʼʼ ►ʼʼಇದು ಬಿಜೆಪಿ ಸರಕಾರದ ಕಲಬುರಗಿ ಅಲ್ಲ...ʼʼ

ವಾರ್ತಾಭಾರತಿವಾರ್ತಾಭಾರತಿ29 Aug 2023 7:30 PM IST
share
ಪ್ರಚೋದನಾಕಾರಿ ಭಾಷಣ ಮಾಡುವವರನ್ನು ಒದ್ದು ಒಳಗೆ ಹಾಕುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಕಲಬುರಗಿ: ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬ ಬಿಜೆಪಿ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ʼʼಬಿಜೆಪಿ ಚಿತ್ತಾಪುರದಲ್ಲಿ ಅಷ್ಟೇ ಅಲ್ಲ ರಾಜ್ಯದಲ್ಲಿಯೂ ಬೆಳೆಯಬಾರದುʼʼ ಎಂದು ಕಿಡಿಕಾರಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದ ಅವರು, ʼʼಈಗ ರಾಜ್ಯದಲ್ಲಿರುವುದು ಬಿಜೆಪಿ ಸರಕಾರ ಅಲ್ಲ, ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಸಂವಿಧಾದ ಇದೆ ಇಲ್ಲಿ. ಪ್ರಚೋದನಾಕಾರಿ ಭಾಷಣ ಮಾಡುವವರನ್ನು ಒಳಗೆ ಹಾಕುತ್ತೇವೆ. ಸಂವಿಧಾನ ಉಲ್ಲಂಘನೆ ಮಾಡಿದವರಿಗೆ ಜೈಲೂಟ ಖಚಿತʼʼ ಎಂದು ಎಚ್ಚರಿಕೆ ನೀಡಿದರು.

ʼʼಶಾಸಕ ಎನ್. ರವಿಕುಮಾರ್ ಅವರು ಜೇವರ್ಗಿಯಲ್ಲಿ ತಮ್ಮ ಪಕ್ಷದ ಟಿಕೆಟ್ ಮಾರಿಕೊಂಡಿದ್ದಾರೆ ಎಂದು ಸ್ವತಃ ಅವರ ಪಕ್ಷದವರೇ ಹೇಳುತ್ತಿದ್ದರು. ಅದಾದ ಮೇಲೆ ಅವರು ಕಲಬುರಗಿಗೆ ಬಂದೇ ಇರಲಿಲ್ಲ. ಆದರೆ ನಿನ್ನೆ ಚಿತ್ತಾಪುರಕ್ಕೆ ಬಂದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಅವರ ಶಿಷ್ಯ ಮಣಿಕಂಠ ರಾಠೋಡ್‌ ಗೆ ಗಡಿಪಾರು ಶಿಕ್ಷೆ ವಿಧಿಸಿದಾಗ ರವಿಕುಮಾರ ಯಾಕೆ ಬಂದು ಪ್ರತಿಭಟನೆ ಮಾಡಲಿಲ್ಲ?, ಇದು ಬಿಜೆಪಿ ಸರಕಾರದ ಕಲಬುರಗಿ ಅಲ್ಲ, ಕಾಂಗ್ರೆಸ್ ಸರಕಾರದ ಕಲಬುರಗಿ. ನಿಮ್ಮ ಶಿಷ್ಯ ಅಷ್ಟೇ ಅಲ್ಲ, ನೀವು ತಪ್ಪು ಮಾಡಿದರೂ ಕೂಡಾ ನಿಮ್ಮ ಮೇಲೂ ಕಾನೂನು ಕ್ರಮ ಆಗುತ್ತದೆ " ಎಂದು ಎಚ್ಚರಿಸಿದರು.

ʼʼಬಿಜೆಪಿ ಸರ್ಕಾರ ಇದ್ದಾಗ ಅಕ್ಕಿ ಹಾಗೂ ಹಾಲಿನಪುಡಿ ಕಳ್ಳತನ ಮಾಡಿರುವ ಆರೋಪ ಹೊತ್ತಿರುವವರಿಗೆ ಮಣಿಕಂಠ ರಾಠೋಡ್‌ ಗೆ ಟಿಕೆಟ್ ನೀಡಲಾಗಿತ್ತು. ಆದರೆ,ನಮ್ಮ ಸರ್ಕಾರ ಬಂದ ಮೇಲೆ ಅಂತವರನ್ನ ಜೈಲಿಗೆ ಕಳಿಸಲಾಗಿದೆ ಅಥವಾ ಅಂತವರು ಜಾಮೀನಿನ ಮೇಲೆ ಹೊರಗಡೆ ಇದ್ದಾರೆʼʼ ಎಂದು ಖರ್ಗೆ ಟೀಕಿಸಿದರು.

ಆಂದೋಲಾ ಸಿದ್ದಲಿಂಗ ಸ್ವಾಮೀಜಿ ವಿರುದ್ದ ಹರಿಹಾಯ್ದ ಸಚಿವರು, " ನಿಮ್ಮದು ಎಂತಹ ತತ್ವ ? ಅಕ್ಕಿ ಕಳ್ಳರಿಗೆ, ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕಳ್ಳತನ ಮಾಡುವವರ ರಕ್ಷಣೆ ಮಾಡಿ ಅಂತ ನಿಮ್ಮ ತತ್ವ ಹೇಳುತ್ತಾ" ? ಎಂದು ತೀಕ್ಷಣವಾಗಿ ಪ್ರಶ್ನಿಸಿದರು.

ʼʼಬಿಜೆಪಿಯವರಿಗೆ ಬಹುಶಃ ಏನು ಮಾಡಬೇಕು ಎನ್ನುವುದೇ ಅರ್ಥ ಆಗುತ್ತಿಲ್ಲ. ಅವರು ಅಧಿಕಾರ ಕಳೆದುಕೊಂಡು ನೂರು ದಿನ ಆಗಿದೆ. ಆದರೆ, ನಾವು ಜನರಿಗೆ ನೀಡಿದ ಭರವಸೆಯನ್ನು ಈಡೇರಿಸುತ್ತಿದ್ದೇವೆ. ಚಂದ್ರಯಾನ ಚಂದ್ರನಿಗೆ ಮುಟ್ಟಿದೆ. ಆದರೆ ವಿರೋಧ ಪಕ್ಷದ ನಾಯಕ ಯಾರು ಎಂದು ಅದು ಬಿಜೆಪಿಗರಿಗೆ ಗೊತ್ತಾಗುತ್ತಿಲ್ಲ. ಅವರ ಪಕ್ಷದಲ್ಲಿ ಏನು ಆಗುತ್ತಿದೆ ಎಂದು ಅವರಿಗೆ ತಿಳಿಯುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ʼʼಒಳ್ಳೆಯ ಆಡಳಿತ ಕೊಡಬೇಕು ಎನ್ನುವ ಉದ್ದೇಶದಿಂದ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದೇವೆ. ನಮ್ಮ ಸರ್ಕಾರವನ್ನು ಟೀಕಿಸುವ ನೈತಿಕತೆ ಬಿಜೆಪಿ ನಾಯಕರಿಗೆ ಇಲ್ಲ ಎಂದ ಸಚಿವರು ಬಿಜೆಪಿಯವರು ಹತಾಶರಾಗಿದ್ದಾರೆ. ಅಧಿಕಾರ ಇಲ್ಲದೇ ಇರುವುದಕ್ಕೆ ನೀರಿನಿಂದ ಹೊರಬಿದ್ದ ಮೀನಿನಂತೆ ಬಿಜೆಪಿಯವರು ಚಡಪಡಿಸುತ್ತಿದ್ದಾರೆ. ಮೊನ್ನೆ ಮೋದಿ ಬೆಂಗಳೂರಿಗೆ ಬಂದಾಗ ಬಿಜೆಪಿ ನಾಯಕರು ಬ್ಯಾರಿಕೇಡ್ ಹಿಂದೆ ಬಂಧಿ ಆಗಿ ಕನ್ನಡಿಗರ ಮಾರ್ಯಾದೆ ಬೀದಿಗೆ ತಂದಿದ್ದರುʼʼ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X