ಪಿಯುಸಿ, ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣ

ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯಾದ್ಯಂತ ಮಾ.1ರಿಂದ ಮಾ.20ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಹಾಗೂ ಮಾ.21ರಿಂದ ಎ.4ರವರೆಗೆ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಕೆಎಸ್ಸಾರ್ಟಿಸಿಯು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆಯನ್ನು ಕಲ್ಪಿಸಿದೆ.
ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಹೋಗುವಾಗ ಮತ್ತು ಹಿಂದಿರುಗುವಾಗ, ‘ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story