ಜ.14, 15ರಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಸಾಂದರ್ಭಿಕ ಚಿತ್ರ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಜ.14ರಿಂದ 2 ದಿನಗಳ ಕಾಲ ಮಳೆ ಸುರಿಯುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ ಇದ್ದು, ಸಮುದ್ರ ಮಟ್ಟದಿಂದ 3.1 ಕಿ.ಮೀ.ವರೆಗೆ ವಿಸ್ತರಿಸಿದೆ. ಇದರಿಂದ ಜ.14 ಮತ್ತು 15ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕರ್ನಾಟಕ ವ್ಯಾಪ್ತಿಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಮಳೆ ಪ್ರಾರಂಭವಾಗಿ, ಹಾಸನ, ಕೊಡಗು, ಮಂಡ್ಯ ಮೈಸೂರು ಹಾಗೂ ತುಮಕೂರಿಗೆ ಮಳೆ ವಿಸ್ತರಿಸಲಿದೆ. ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಪ್ರಕಟನೆಯಲ್ಲಿ ಹೇಳಿದೆ.
Next Story