ಎ.27 ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಂದು ವಾರದ ಕಾಲ ಮಳೆ ಸಾಧ್ಯತೆ

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಯಲ್ಲಿ ನಾಳೆಯಿಂದ(ಎ.27) ಒಂದು ವಾರದ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಮುಂದುವರೆಯಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಬಾಗಲಕೋಟೆ, ಬೆಳಗಾವಿ ಹಾಗೂ ಗದಗ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 50ರಿಂದ 60 ಕಿ.ಮೀ. ವೇಗ) ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿ ಆಲಿಕಲ್ಲು ಬೀಳುವ ಸಂಭವವಿದೆ.
ರವಿವಾರದಂದು ಕಲಬುರಗಿಯಲ್ಲಿ 41.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಹೊನ್ನಾವರದಲ್ಲಿ 34.8, ಕಾರವಾರದಲ್ಲಿ 37.6, ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 35, ಬೀದರ್ ನಲ್ಲಿ 40.4, ವಿಜಯಪುರದಲ್ಲಿ 39, ಬಾಗಲಕೋಟೆಯಲ್ಲಿ 37.7, ಧಾರವಾಡದಲ್ಲಿ 35, ಗದಗದಲ್ಲಿ 37.2, ಕಲಬುರಗಿಯಲ್ಲಿ 41.5, ಹಾವೇರಿಯಲ್ಲಿ 35.6, ಕೊಪ್ಪಳದಲ್ಲಿ 36.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.