ರಾಜಭವನ ಮುತ್ತಿಗೆಗೆ ಯತ್ನ: ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ವಾಟಾಳ್ ನಾಗರಾಜ್ ಅವರ ಜೊತೆ ಸಾ.ರಾ.ಗೋವಿಂದು ಸೇರಿದಂತೆ ಹಲವರನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ʼʼಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ ಖಂಡನೀಯ. ರಾಜ್ಯ ಸರ್ಕಾರ ಕೂಡಲೇ ನೀರು ಹರಿಸುವುದನ್ನು ನಿಲ್ಲಿಸಬೇಕು. ಇಲ್ಲವಾದರೇ ಸೆ.29ರಂದು ರಾಜ್ಯಾದ್ಯಂತ ದೊಡ್ಡಮಟ್ಟದಲ್ಲಿ ಹೋರಾಟ ಮಾಡುತ್ತೇವೆʼʼ ಎಂದು ಎಚ್ಚರಿಕೆ ನೀಡಿದರು.
Next Story