ಅತ್ಯಾಚಾರ ಪ್ರಕರಣ | ಮುನಿರತ್ನಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ
ಮುನಿರತ್ನ
ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಇಂದು(ಅ.5) ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮುನಿರತ್ನ ಅವರನ್ನು ಅ.19ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಎಸ್ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರುಪಡಿಸಿದ್ದು, ಮತ್ತೆ ಮುನಿರತ್ನ ಅವರನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಕೋರ್ಟ್ಗೆ ಮನವಿ ಮಾಡಿದರು. ಆದರೆ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
Next Story