ರತನ್ ಟಾಟಾ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ
ರತನ್ ಟಾಟಾ | PC : PTi
ಬೆಂಗಳೂರು : ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ಬುಧವಾರ ರಾತ್ರಿ ನಿಧನರಾಗಿದ್ದಾರೆ.
86 ವರ್ಷದ ರತನ್ ಟಾಟಾ ಅವರು ತಮ್ಮ ವಯೋಸಹಜ ಕಾಯಿಲೆಗಳಿಗೆ ಸೋಮವಾರ ಚಿಕಿತ್ಸೆಗೊಳಗಾಗಿದ್ದರು. ಆದರೆ ಬಳಿಕ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.
ಸಿಎಂ ಸಂತಾಪ :
ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ. ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಸಿದ್ದರಾಮಯ್ಯ, ಮುಖ್ಯಮಂತ್ರಿ
Next Story