ಹೈಕೋರ್ಟ್ ಕಲಾಪದ ನೇರ ಪ್ರಸಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ವಕೀಲರ ಸಂಘದಿಂದ ಸಿಜೆಗೆ ಮನವಿ
ಬೆಂಗಳೂರು : ಕರ್ನಾಟಕ ಹೈಕೋರ್ಟ್ನಲ್ಲಿ ಕಲಾಪದ ನೇರ ಪ್ರಸಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘವು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿಕೊಂಡಿದೆ.
ವಿಚಾರಣೆಯೊಂದರ ಸಂದರ್ಭದಲ್ಲಿ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಷಾನಂದ ಸಾಯಿ ಅವರ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ವಿವಾದ ಸೃಷ್ಟಿಯಾಗಿದೆ. ಇದು ವಕೀಲ ವೃತ್ತಿ ಆಯ್ದುಕೊಂಡ ವಕೀಲರ ಭಾವನೆಗಳನ್ನು ಘಾಸಿಗೊಳಿಸುತ್ತದೆ. ಮಹಿಳಾ ವಕೀಲೆ ಬಳಿ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಷಾನಂದ ಸಾಯಿ ಹೇಳಿದ ಹೇಳಿಕೆಯು ರಾಷ್ಟ್ರದ ಗಮನವನ್ನು ಸೆಳೆದಿದೆ. ಆದ್ದರಿಂದ ನ್ಯಾಯಾಲಯಗಳಲ್ಲಿನ ಲೈವ್ ಸ್ಟ್ರೀಮಿಂಗ್ ನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕು. ಇಲ್ಲದಿದ್ದರೆ ನ್ಯಾಯಾಲಯಗಳ ಮೇಲೆ ಸಾರ್ವಜನಿಕರಿಗಿರುವ ನಂಬಿಕೆಗೆ ಧಕ್ಕೆಯುಂಟಾಗುತ್ತದೆ. ನ್ಯಾಯಲಯಗಳ ಚಿತ್ರಣಕ್ಕೆ ಸಂಪೂರ್ಣವಾಗಿ ಹಾನಿಯುಂಟು ಮಾಡುತ್ತದೆ ಎಂದು ವಕೀಲರ ಸಂಘ ಹೈಕೋರ್ಟ್ಗೆ ಮನವಿ ಮಾಡಿದೆ.
Next Story