ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ : ಸ್ಪಷ್ಟನೆ ನೀಡಿದ ಸಿಎಂ ಕಚೇರಿ
ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರಕಾರದ ಮುಂದಿದೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಿಎಂ ಕಚೇರಿ ಸ್ವಷ್ಟನೆ ನೀಡಿದೆ.
ಸರಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರಕಾರ ಮುಂದಾಗಿದೆ ಎಂಬ ವಿಚಾರ ಚರ್ಚೆಗೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಕಚೇರಿ ಈ ಬಗ್ಗೆ ಸ್ಪಷ್ಟನೆ ನೀಡಿದೆ.
ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಮುಸ್ಲಿಂ ಸಚಿವರು ಮತ್ತು ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು.
Next Story