Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹೊರಗುತ್ತಿಗೆ ನೇಮಕದಲ್ಲಿಯೂ ಮೀಸಲಾತಿ :...

ಹೊರಗುತ್ತಿಗೆ ನೇಮಕದಲ್ಲಿಯೂ ಮೀಸಲಾತಿ : ರಾಜ್ಯ ಸರಕಾರದಿಂದ ಸುತ್ತೋಲೆ

ವಾರ್ತಾಭಾರತಿವಾರ್ತಾಭಾರತಿ20 May 2024 7:32 PM IST
share
ಹೊರಗುತ್ತಿಗೆ ನೇಮಕದಲ್ಲಿಯೂ ಮೀಸಲಾತಿ : ರಾಜ್ಯ ಸರಕಾರದಿಂದ ಸುತ್ತೋಲೆ

ಬೆಂಗಳೂರು : ಸರಕಾರಿ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರಕಾರದ ಕಾರ್ಯನೀತಿಯಾಗಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸಲು ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ.

ಸೋಮವಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರಕಾರದ ಕಾರ್ಯದರ್ಶಿ ರಂದೀಪ್ ಡಿ. ಸುತ್ತೋಲೆ ಹೊರಡಿಸಿದ್ದು, ‘2023ರ ಡಿಸೆಂಬರ್ 21ರ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕದಲ್ಲಿ ಮೀಸಲಾತಿ ನೀತಿ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಆದುದರಿಂದ, ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸೂಚಿಸಲಾಗಿದೆ.

ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ. ಪ್ರತಿವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆಟಿಪಿಪಿ ಅಧಿನಿಯಮ 1999ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.

ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇ.33ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು. ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಜಾತಿ ಪ್ರಮಾಣ ಪತ್ರ ಮತ್ತು ಇತರ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು. ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು(ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ).

ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ/ಅರ್ಧದಲ್ಲಿ ಬಿಟ್ಟಿದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪ್ರವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳತಕ್ಕದ್ದು. ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು.

ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳು. ಈ ನೇಮಕವು ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ. ಈ ಮೇಲಿನ ಸೂಚನೆಗಳು ಎಲ್ಲ ಇಲಾಖೆಗಳು/ಸ್ನಾಯತ್ತ ಸಂಸ್ಥೆಗಳು/ ನಿಗಮಗಳು/ಮಂಡಳಿಗಳು/ವಿವಿಗಳಿಗೂ ಅನ್ವಯಿಸುತ್ತದೆ ಎಂದು ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X