ಸದಾನಂದಗೌಡ ಬಾಯಿ ಮುಚ್ಚಿಕೊಂಡು ಇರಬೇಕು, ಇಲ್ಲ ಅಂದರೆ ಬಂಡವಾಳ ಬಯಲು ಮಾಡುವೆ : ಯತ್ನಾಳ್ ವಾಗ್ದಾಳಿ
ಬೆಂಗಳೂರು : ಸದಾನಂದಗೌಡ ಅವರು ಬಾಯಿ ಮುಚ್ಚಿಕೊಂಡು ಇರಬೇಕು, ಇಲ್ಲದೆ ಹೋದರೆ ಅವರ ಬಂಡವಾಳ ಬಯಲು ಮಾಡ್ತೇನೆ ಎಂದು ಮಾಜಿ ಸಿಎಂ ಸದಾನಂದಗೌಡ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಶುಕ್ರವಾರ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಸದಾನಂದ ಗೌಡರು ಮಾತನಾಡಿರೋದನ್ನೆಲ್ಲ ಬಿಚ್ಚಿಡುತ್ತೇನೆ. ನನಗಿಂತ ಕೆಟ್ಟದಾಗಿ ಸದಾನಂದಗೌಡ ಮಾತನಾಡಿದ್ದಾರೆ. ನಾನು ವಕ್ಫ್ ವಿರುದ್ಧ ಮಾತನಾಡಿದ್ದೇನೆ. ಸದಾನಂದ ಗೌಡ ಯಾಕೆ ಗಾಬರಿಯಾಗಬೇಕು" ಎಂದು ಯತ್ನಾಳ್ ಪ್ರಶ್ನಿಸಿದರು.
"ದೀಪ ಆರುವವರ ಬಗ್ಗೆ ನಾನು ಮಾತನಾಡಲ್ಲ. ನಾನು ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ನಾವು ವಕ್ಫ್ ಹೋರಾಟ ನಿಲ್ಲಿಸಲ್ಲ. ಬಿಜೆಪಿ ರಾಜ್ಯಾಧ್ಯಕ್ಷ, ಸಿಎಂ ಅಭ್ಯರ್ಥಿ ಆಗಲು ನನ್ನ ಹೋರಾಟ ಅಲ್ಲ" ಎಂದರು.
Next Story