ದ್ವಿತೀಯ ಪಿಯುಸಿ ಪಶ್ನೆ ಪತ್ರಿಕೆ ಸೋರಿಕೆ ಪ್ರಕರಣ ; 17 ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್
ಸಾಂದರ್ಭಿಕ ಚಿತ್ರ
ಬೆಂಗಳೂರು : 2015-16ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿನ 17 ಆರೋಪಿಗಳನ್ನು ಖುಲಾಸೆಗೊಳಿಸಿ ಬೆಂಗಳೂರು ನಗರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
2016ರ ಮಾ.21ರಂದು ನಡೆದಿದ್ದ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಅದೇ ದಿನ ದಿನ ಬೆಳಗ್ಗೆ 7.30ಕ್ಕೆ ಸೋರಿಕೆಯಾಗಿ ವಾಟ್ಸ್ಆ್ಯಪ್ನಲ್ಲಿ ಹರಿದಾಡಿತ್ತು. ಈ ಸಂಬಂಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಪ್ರಕರಣ ಸಿಐಡಿಗೆ ವರ್ಗಾವಣೆಗೊಂಡಿತ್ತು. ತನಿಖೆ ನಡೆಸಿದ್ದ ಸಿಐಡಿ ತಂಡ 18 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ವಿಚಾರಣಾ ಹಂತದಲ್ಲಿಯೇ ಓರ್ವ ಆರೋಪಿ ಸಾವನ್ನಪ್ಪಿದ್ದರು. ಉಳಿದ ಆರೋಪಿಗಳನ್ನು ನ್ಯಾಯಾಲಯದ ಇಂದು ಖುಲಾಸೆಗೊಳಿಸಿದ್ದು, ಆರೋಪಿಗಳ ಪರ ಆರ್.ಪಿ. ಚಂದ್ರಶೇಖರ್ ವಾದ ಮಂಡಿಸಿದ್ದರು.
Next Story