Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣದ...

ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ : ಆರ್‌.ಅಶೋಕ್

"ರಾಮನಗರ ಜಿಲ್ಲೆಯ ಹೆಸರು ಬದಲಿಸುವ ಹಕ್ಕು ಕಾಂಗ್ರೆಸ್‌ಗಿಲ್ಲ, ಇದು ತುಘಲಕ್‌ ಹುಚ್ಚರ ಆಡಳಿತ"

ವಾರ್ತಾಭಾರತಿವಾರ್ತಾಭಾರತಿ10 July 2024 5:15 PM IST
share
ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ : ಆರ್‌.ಅಶೋಕ್

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ತಿಳಿಸಿದರು.

ಬಿಜೆಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಭಾಗಿಯಾದ ಮುಡಾ ಹಗರಣದ ಬಗ್ಗೆ ಮಾತನಾಡಲು ಸದನದಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ ಮಂಡಿಸಲಾಗುವುದು. ಜುಲೈ.15 ರಿಂದ ನಡೆಯಲಿರುವ ಸದನವನ್ನು ಇನ್ನೂ ಒಂದು ವಾರ ವಿಸ್ತರಣೆ ಮಾಡಬೇಕೆಂದು ಆಗ್ರಹಿಸಲಾಗುವುದು" ಎಂದರು.

ʼಝೀಕಾ ವೈರಸ್‌, ಡೆಂಗ್ಯೂ ರೋಗಗಳು ಹೆಚ್ಚಿದ್ದರೂ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕೆಂದು ಆಗ್ರಹಿಸಿದ್ದರೂ ಅದರ ಬಗ್ಗೆ ಸರಕಾರ ತಲೆ ಕೆಡಿಸಿಕೊಂಡಿಲ್ಲ. ದರಗಳ ಏರಿಕೆಯಿಂದಾಗಿ ರೈತರ ಆತ್ಮಹತ್ಯೆ ಹೆಚ್ಚಿದೆ. ಇಲಾಖೆಗಳ ಅನುದಾನ ಕಡಿತ, 700 ಕೋಟಿ ರೂ. ಹಾಲು ಪ್ರೋತ್ಸಾಹಧನ ಬಾಕಿ ಮೊದಲಾದ ಸಮಸ್ಯೆಗಳು ಕಂಡು ಬಂದಿದೆ. ಒಂದೇ ವರ್ಷದಲ್ಲಿ ಕಾಂಗ್ರೆಸ್‌ ಶಿಶುಪಾಲನಂತೆ ನೂರು ತಪ್ಪುಗಳನ್ನು ಮಾಡಿದೆʼ ಎಂದು ದೂರಿದರು.

ʼವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಯಾರೂ ಭಾಗಿಯಾಗಿಲ್ಲ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ. ಆದರೀಗ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಎಸ್‌ಐಟಿ ಮೂಲಕ ಎಲ್ಲರಿಗೂ ಕ್ಲೀನ್‌ ಚಿಟ್‌ ನೀಡುವ ಪ್ರಯತ್ನ ನಡೆದಿದೆ. ಇದರಲ್ಲಿ ಇನ್ನೂ ಮೂವರು ಸಚಿವರು ಶಾಮೀಲಾಗಿದ್ದಾರೆ. ನಿಗಮದ ಅಧ್ಯಕ್ಷರೇ ಶಾಂಗ್ರೀಲಾ ಹೋಟೆಲ್‌ನಲ್ಲಿ ಸಭೆ ಸೇರಿದ್ದರ ಬಗ್ಗೆ ಹೇಳಿದ್ದಾರೆ. ಈ ಕುರಿತು ಬಿಡುಗಡೆಯಾದ ಆಡಿಯೋದಲ್ಲಿ ಎಲ್ಲವೂ ಹೊರಬಂದಿದೆʼ ಎಂದರು.

ಕಾಂಗ್ರೆಸ್‌ಗೆ ಹೆಸರು ಬದಲಿಸುವ ಹಕ್ಕಿಲ್ಲ:

ರಾಮನಗರ ಜಿಲ್ಲೆಗೆ ಸ್ಥಳ ಮಹಿಮೆ ಇದೆ. ಈ ಹೆಸರನ್ನು ಕಾಂಗ್ರೆಸ್‌ ನಾಯಕರು ಇಟ್ಟಿಲ್ಲ ಎಂದ ಮೇಲೆ ಅದನ್ನು ತೆಗೆಯಲು ಅವರಿಗೆ ಯಾವುದೇ ಹಕ್ಕು ಇಲ್ಲ. ಕರ್ನಾಟಕದಲ್ಲಿ ರಾಮ-ಕೃಷ್ಣ ಎಂದಿರುವ ಊರುಗಳ ಹೆಸರುಗಳನ್ನು ಬದಲಾಯಿಸುತ್ತಾರಯೇ?. ಶೋಲೆ ಸಿನಿಮಾ ಚಿತ್ರೀಕರಣವಾದಾಗಲೂ ಅಲ್ಲಿ ರಾಮಗಢ ಎಂಬ ಹೆಸರನ್ನೇ ಇಟ್ಟಿದ್ದರು. ಹೆಸರು ಬದಲಾಯಿಸುವ ಬದಲು ಬೆಂಗಳೂರು ನಗರದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಲಿ. ರಾಮನ ಮೇಲೆ ದ್ವೇಷ ಇದ್ದರೆ ಬೇರೆ ದಾರಿ ನೋಡಿಕೊಳ್ಳಲಿ. ಆಯಾಯ ಜಿಲ್ಲೆಗೆ ಅದರದ್ದೇ ಆದ ಘನತೆ ಇದೆ. ಹುಚ್ಚರಂತೆ, ತುಘಲಕ್‌ರಂತೆ ಎಲ್ಲವನ್ನೂ ಬೆಂಗಳೂರಿಗೆ ಸೇರಿಸಬಾರದು ಎಂದು ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X