ಹಾಸನಾಂಬೆ ದರ್ಶನದ ವೇಳೆ ವಿದ್ಯುತ್ ಶಾಕ್; ಹಲವರಿಗೆ ಗಾಯ
Photo: wikipedia.org
ಹಾಸನ: ಜಿಲ್ಲೆಯ ಪ್ರಸಿದ್ಧ ಹಾಸನಾಂಬೆ ಜಾತ್ರೆ ಮಹೋತ್ಸವ ದರ್ಶನ ಸರದಿ ಸಾಲಿನಲ್ಲಿ ನಿಂತ ಭಕ್ತರಿಗೆ ವಿದ್ಯುತ್ ಶಾಕ್ ತಗುಲಿ ನಂತರದ ನೂಕುನುಗ್ಗಲಿನಲ್ಲಿ ಯುವತಿಯ ಸ್ಥಿತಿ ಗಂಭಿರವಾಗಿದ್ದು, 50ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಮಧ್ಯಾಹ್ನ ನಡೆದಿದೆ.
ವಿದ್ಯುತ್ ಶಾಕ್ ನಿಂದ ಒಬ್ಬರ ಮೇಲೊಬ್ಬರು ಬಿದ್ದು ಅವಘಡವುಂಟಾಗಿ ಸಣ್ಣಪುಟ್ಟ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗಿದ್ದು 25 ಜನರು ಚೇತರಿಸಿಕೊಂಡು ಮನೆಗೆ ತೆರಳಿದ್ದು , ಮತ್ತಷ್ಟು ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಳಗ್ಗೆ ಹಾಸನಾಂಬೆ ದರ್ಶನ ಮಾಡಲೆಂದು ಸಾಮಾನ್ಯ ಭಕ್ತರು ಧರ್ಮ ದರ್ಶನ ಸಾಲಿನಲ್ಲಿ ನಿಂತಿದ್ದಾಗ ಕಂಬಿಯಲ್ಲಿ ಕರೆಂಟ್ ಶಾಕ್ ಹೊಡೆದಿದೆ.
ನಂತರ ಬ್ಯಾರಿಕೇಡ್ ಮೇಲೆ ಬಿದ್ದು ನೂಕುನುಗ್ಗಲು ಉಂಟಾಗಿ ಮಹಿಳೆಯರು, ಮಕ್ಕಳು ಸೇರಿದಂತೆ ಭಕ್ತರು ಚೆಲ್ಲಾಪಿಲ್ಲಿಯಾಗಿ ಬಿದ್ದರು. ಕೆಲವರಿಗೆ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
Next Story