ಲೈಂಗಿಕ ದೌರ್ಜನ್ಯ ಪ್ರಕರಣ | ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ
ಸೂರಜ್ ರೇವಣ್ಣ
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಅವರನ್ನು 14 ದಿನ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ಕೋರ್ಟ್ನ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ರವಿವಾರ ಹಾಸನದಲ್ಲಿ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಅಲ್ಲಿಂದ ನೇರವಾಗಿ ಸೂರಜ್ ರೇವಣ್ಣರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿ ಇಲ್ಲಿನ ಕೋರಮಂಗಲದಲ್ಲಿರುವ 42ನೆ ಎಸಿಎಂಎ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು. ಈ ವೇಳೆ ನ್ಯಾಯಾಧೀಶರು ಸೂರಜ್ ರೇವಣ್ಣರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿದ್ದಾರೆ.
ಏನಿದು ಘಟನೆ :
ಜೂ.22ರಂದು ಇಲ್ಲಿನ ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ಬಂದ ಸಂತ್ರಸ್ತ ಯುವಕನೋರ್ವ, ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು. ಅನಂತರ, ಸೂರಜ್ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 377, 342, 506, 34ರ ಅಡಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ದೂರಿಗೆ ಸಾಕ್ಷಿ ನೀಡಲು ಹಾಸನದ ಸೆನ್ ಪೊಲೀಸ್ ಠಾಣೆಗೆ ನಿನ್ನೆ ಸಂಜೆ 7.30ಕ್ಕೆ ಬಂದಿದ್ದ ಸೂರಜ್ ರೇವಣ್ಣನನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು, ವಿಚಾರಣೆಗೊಳಪಡಿಸಿದರು. ತದ ನಂತರವೂ ರಾತ್ರಿ ಪೂರ್ತಿ ಠಾಣೆಯಲ್ಲಿ ಇರಿಸಿಕೊಂಡು ಹೇಳಿಕೆ ದಾಖಲಿಸಿಕೋಂಡು ಸೂರಜ್ ರೇವಣ್ಣ ಅವರನ್ನು, ಪೊಲೀಸರು ಜೂ.23ರ ರವಿವಾರ ಬೆಳಗ್ಗೆ ಬಂಧಿಸಿದ್ದಾರೆ.