ಸಿಎಂ-ಡಿಸಿಎಂ ಹುದ್ದೆ ಜಗ್ಗಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ : ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ | Photo: PTI
ಬೆಂಗಳೂರು : ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ನಡುವಿನ ಹುದ್ದೆ ಸಂಬಂಧಿತ ಜಗಳದಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತವಾಗಿವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ಮಧ್ಯೆ ಝೀಕಾ ವೈರಸ್ ಕೂಡ ಸಂಕಷ್ಟ ತಂದೊಡ್ಡುತ್ತಿದೆ. ಇದರ ಕುರಿತು ಮುಂದಿನ ಅಧಿವೇಶನದಲ್ಲಿ ಚರ್ಚೆ ನಡೆಸಲಿದ್ದೇವೆ ಎಂದು ಹೇಳಿದರು.
ಡೆಂಗ್ಯೂ ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಬಹಳಷ್ಟು ಜನರು ದಾಖಲಾಗುತ್ತಿದ್ದು, ಸರಿಯಾಗಿ ಔಷಧಿ ಸಿಗುತ್ತಿಲ್ಲ. ಔಷಧಿಯ ಬಿಲ್ ಹೆಚ್ಚಿಸಿದ್ದಾರೆ. ಡೆಂಗ್ಯೂ ಪರೀಕ್ಷೆಗೆ ಸರಕಾರ ನಿಗದಿಪಡಿಸಿದ ಮೊತ್ತವನ್ನು ಯಾರೂ ಪಾಲಿಸುತ್ತಿಲ್ಲ ಎಂದು ಅವರು ಆಕ್ಷೇಪಿಸಿದರು.
Next Story