ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಸಿದ್ದರಾಮಯ್ಯ
ಬೆಂಗಳೂರು: "ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನು ಯಾವುದೇ ತಪ್ಪು ಮಾಡಿಲ್ಲ. ಗೋಧ್ರಾ ಹತ್ಯಾಕಾಂಡ ಆದಾಗ ಗುಜರಾತ್ ಸಿಎಂ ಆಗಿದ್ದ ಪ್ರಧಾನಿ ಮೋದಿಯವರು ರಾಜೀನಾಮೆ ಕೊಟ್ಟಿದ್ದರೇ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೇಲೆ ಆರೋಪಗಳಿವೆಯಲ್ಲವೇ, ಅವರು ರಾಜೀನಾಮೆ ನೀಡಿದ್ದಾರೆಯೇ, ಹಾಗಾದರೆ ಅವರಿಗೆ ಮುಜುಗರವಾಗುವುದಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
Next Story