ಲೋಕಸಭಾ ಚುನಾವಣೆಯಲ್ಲಿ ಪುತ್ರ ಸುನೀಲ್ ಬೋಸ್ ಸ್ಪರ್ಧೆ ವಿಚಾರ: ಸಚಿವ ಎಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದು ಹೀಗೆ...
ಫೋಟೊ - facebook.com/sunilboseofficial/
ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಪುತ್ರ ಸುನೀಲ್ ಬೋಸ್ ಸ್ಪರ್ಧೆ ವಿಚಾರ ಕುರಿತು ಡಾ. ಸಚಿವ ಎಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕಳೆದ ಮೂರು ಭಾರಿಯೂ ಸುನೀಲ್ ಬೋಸ್ ಗೆ ಅವಕಾಶ ಸಿಕ್ಕಿಲ್ಲ. ಅದರೂ ಅವನು ಯಾವುದೇ ಬೇಸರವಿಲ್ಲದೆ ಪಕ್ಷ ಸಂಘಟನೆ ಮಾಡುತ್ತಿದ್ದಾನೆ. ಈ ಬಾರಿ ಅವಕಾಶ ಸಿಕ್ಕರೆ ಸ್ಪರ್ಧೆ ಮಾಡುತ್ತಾನೆ. ಈ ವಿಚಾರದ ಬಗ್ಗೆಯೂ ಪಕ್ಷದಲ್ಲಿ ಯಾವ ಚರ್ಚೆಗಳು ನಡೆದಿಲ್ಲ ಎಂದು ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆ ನನ್ನನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುವ ಬಗ್ಗೆ ಪಕ್ಷದಲ್ಲಿ ಯಾವ ಚರ್ಚೆಯೂ ಆಗಿಲ್ಲ. ಇದರ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಸುದ್ದಿಗಳು ಬರುತ್ತಿದೆ ಅಷ್ಟೇ. ನಮಗೆ ಅಂಥಹ ಯಾವುದೇ ಸೂಚನೆ ಬಂದಿಲ್ಲ. ಪಕ್ಷದಲ್ಲೂ ಚರ್ಚೆಗಳು ನಡೆದಿಲ್ಲ. ನಡೆಯದಿರೋ ಚರ್ಚೆ ನಿಮ್ಮ ಗಮನಕ್ಕೆ ಹೇಗೆ ಬಂತೂ ಗೊತ್ತಿಲ್ಲ ಎಂದು ಸಚಿವ ಡಾ.ಎಚ್.ಸಿ ಮಹದೇವಪ್ಪ ಮಾಧ್ಯಮಗಳಿಗೆ ಪ್ರಶ್ನೆ ಹಾಕಿದರು.