ರಾಜ್ಯಪಾಲರನ್ನು ಭೇಟಿಯಾದ ಸ್ಪೀಕರ್, ಡೆಪ್ಯುಟಿ ಸ್ಪೀಕರ್
ಬೆಂಗಳೂರು: ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹಾಗೂ ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಗುರುವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು.
ವಿಧಾನಸಭೆಯಿಂದ ಬಿಜೆಪಿಯ 10 ಮಂದಿ ಶಾಸಕರನ್ನು ಅಮಾನತುಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ ರಾಜ್ಯಪಾಲರ ಬಳಿ ಸ್ಪೀಕರ್ ಅವರು ಮಾಹಿತಿ ನೀಡಿದ್ದಾರೆ. ಈ ವೇಳೆ ವಿಧಾನಸಭೆ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಉಪಸ್ಥಿತರಿದ್ದರು.
ರಾಜ್ಯಪಾಲರ ಬೇಟಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸ್ಪೀಕರ್, ''ನಿನ್ನೆ ಸದನದಲ್ಲಿ ನಡೆದ ಎಲ್ಲಾ ವಿಚಾರಗಳನ್ನ ರಾಜ್ಯಪಾಲರ ಗಮನಕ್ಕೆ ತಂದಿದ್ದೇನೆ. ನನ್ನ ಜವಾಬ್ದಾರಿಯನ್ನ ನಾನು ನಿರ್ವಹಿಸಿದ್ದೇನೆ. ಸಂಪೂರ್ಣ ವರದಿಯನ್ನ ಸಲ್ಲಿಕೆ ಮಾಡಿದ್ದೇನೆ. ರಾಜ್ಯಪಾಲರೂ ಸಹ ಕೆಲ ಸಲಹೆ ಸೂಚನೆಗಳನ್ನ ಕೊಟ್ಟಿದ್ದಾರೆ'' ಎಂದು ತಿಳಿಸಿದರು.
Next Story