Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಾಸಕರಿಬ್ಬರಿಗೆ ಅಧಿಕಾರಿಗಳಿಂದ ಅಪಮಾನ;...

ಶಾಸಕರಿಬ್ಬರಿಗೆ ಅಧಿಕಾರಿಗಳಿಂದ ಅಪಮಾನ; ‘ಹಕ್ಕುಬಾಧ್ಯತಾ ಸಮಿತಿ’ಗೆ ವಹಿಸಲು ಸ್ಪೀಕರ್ ರೂಲಿಂಗ್

ವಾರ್ತಾಭಾರತಿವಾರ್ತಾಭಾರತಿ18 March 2025 5:43 PM IST
share
ಶಾಸಕರಿಬ್ಬರಿಗೆ ಅಧಿಕಾರಿಗಳಿಂದ ಅಪಮಾನ; ‘ಹಕ್ಕುಬಾಧ್ಯತಾ ಸಮಿತಿ’ಗೆ ವಹಿಸಲು ಸ್ಪೀಕರ್ ರೂಲಿಂಗ್

ಬೆಂಗಳೂರು : ಕಾಂಗ್ರೆಸ್ ಸದಸ್ಯ ರಾಜು ಕಾಗೆ ಹಾಗೂ ಬಿಜೆಪಿ ಸದಸ್ಯ ಬಸವರಾಜ ಮತ್ತಿಮೋಡ್ ಅವರಿಗೆ ಅಧಿಕಾರಿಗಳಿಂದ ಅಪಮಾನವಾಗಿರುವ ವಿಚಾರವನ್ನು ‘ವಿಧಾನಸಭೆಯ ಹಕ್ಕುಬಾಧ್ಯತಾ ಸಮಿತಿ’ಗೆ ವರ್ಗಾಯಿಸಲಾಗುವುದು ಎಂದು ಸ್ಪೀಕರ್ ಯು.ಟಿ.ಖಾದರ್ ರೂಲಿಂಗ್ ನೀಡಿದರು.

ಮಂಗಳವಾರ ವಿಧಾನಸಭೆಯಲ್ಲಿ ಉಭಯ ಸದಸ್ಯರು ತಮಗಾದ ಅಪಮಾನದ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿದ ವೇಳೆ ಆಡಳಿತ ಮತ್ತು ಪ್ರತಿಪಕ್ಷವೆಂಬ ಪಕ್ಷಬೇಧ ಮರೆತು ಎಲ್ಲ ಸದಸ್ಯರು, ‘ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಧ್ವನಿಗೂಡಿಸಿದರು.

ನಿಮಗೂ ತಲೆಯಿಲ್ಲ: ಆರಂಭಕ್ಕೆ ಪ್ರಸ್ತಾಪಿಸಿದ ಸದಸ್ಯ ರಾಜು ಕಾಗೆ, ‘ಫೆ.11ರಂದು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಸಭೆ ಮುಗಿದ ನಂತರ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಬಳಿ ಹೋಗಿ ತಮ್ಮ ಕ್ಷೇತ್ರದಲ್ಲಿನ ಭವನವೊಂದರ ನಿರ್ಮಾಣ ಕೆಲಸದ ವಿಚಾರವಾಗಿ ಪ್ರಸ್ತಾಪಿಸಿದೆ. ಆಗ ಅವರು ‘ಜಿಲ್ಲಾಧಿಕಾರಿಗೂ ತಲೆಯಿಲ್ಲ, ನಿಮಗೂ ತಲೆಯಿಲ್ಲ’ ಎಂದು ಅಪಮಾನ ಮಾಡಿದ್ದಾರೆ. ನನ್ನ ಮಾತಿಗೂ ಬೆಲೆ ಕೊಡದೆ ಹೋಗಿದ್ದಾರೆ. ಉದ್ಧಟತನ ತೋರಿಸಿದ್ದಾರೆ’ ಎಂದು ದೂರಿದರು.

‘ಇಪ್ಪತ್ತೈದು ವರ್ಷದಿಂದ ಶಾಸಕನಾಗಿದ್ದೇನೆ. ಇದುವರೆಗೂ ಈ ರೀತಿ ಯಾವ ಅಧಿಕಾರಿಯೂ ನಡೆದುಕೊಂಡಿಲ್ಲ. ಸರ್ವಾಧಿಕಾರಿ ಧೋರಣೆ ಸಾರ್ವಜನಿಕ ಕೆಲಸ ಮಾಡುವುದು ಅಧಿಕಾರಿಗೆ ನಿಜಕ್ಕೂ ಶೋಭೆಯಲ್ಲ. ನಾನೊಬ್ಬ ಜನಪ್ರತಿನಿಧಿ. ನಮಗೆ ಘೋರ ಅಪಮಾನ ಮಾಡಿದ ಅಧಿಕಾರಿಗೆ ಶಿಕ್ಷೆಯಾಗಬೇಕು. ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಕೋರಿ 50ರಿಂದ 60 ಶಾಸಕರು ಸಹಿ ಹಾಕಿ ಪತ್ರ ಕೊಟ್ಟಿದ್ದಾರೆ. ಇದನ್ನು ಹಕ್ಕುಚ್ಯುತಿ ಸಮಿತಿಗೆ ನೀಡಬೇಕು ಎಂದು ರಾಜು ಕಾಗೆ ಒತ್ತಾಯಿಸಿದರು.

ಈ ವೇಳೆ ಮತ್ತೊಬ್ಬ ಸದಸ್ಯ ಬಸವರಾಜ್ ಮತ್ತಿಮೋಡ್ ಮಾತನಾಡಿ, ‘ತಮ್ಮ ಕ್ಷೇತ್ರ ವ್ಯಾಪ್ತಿಯ ಪುರಸಭೆ ಚುನಾವಣೆ ವೇಳೆ ಹೆಚ್ಚುವರಿ ಎಸ್ಪಿ ಮಹೇಶ್ ಮೇಘಣ್ಣನವರ್ ತಮ್ಮನ್ನು ನೂಕಿದ್ದಾರೆ. ಅಲ್ಲದೆ, ಇಬ್ಬರು ಸದಸ್ಯರನ್ನು ಅಪಹರಿಸಲು ಸಹಕಾರ ನೀಡಿದ್ದಾರೆ. ಶಾಸಕರಿಗೆ ಗೌರವವೇ ಇಲ್ಲ. ಎದೆ ಮೇಲೆ ಕೈ ಹಾಕಿ ನೂಕಿದ್ದಾರೆ. ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ವಿಪಕ್ಷ ನಾಯಕ ಆರ್.ಅಶೋಕ್, ‘ಆಡಳಿತ ಪಕ್ಷದವರಿಗೆ ಒಂದು ಪೆಟ್ಟಾದರೆ, ವಿರೋಧ ಪಕ್ಷದವರಿಗೆ ಎರಡು ಪೆಟ್ಟು ಎನ್ನುವಂತಾಗಿದೆ. ಎಲ್ಲಿಗೆ ಹೋಗುತ್ತಿದೆ?, ಅಧಿಕಾರಿಗಳೇ ಗೌರವ ಕೊಡಲ್ಲ ಎಂದರೆ ಹೇಗೆ?, ಸಾರ್ವಜನಿಕ ಲೆಕ್ಕ ಪತ್ರಗಳ ಸಮಿತಿಗೆ ಸರಕಾರವನ್ನು ಪ್ರಶ್ನೆ ಮಾಡುವಷ್ಟು ಅಧಿಕಾರವಿರುತ್ತದೆ. ಅಧಿಕಾರಿಗಳು ಬೆಲೆ ಕೊಡುವುದಿಲ್ಲ ಎಂದಾದರೆ ಸಮಿತಿಯನ್ನು ಮುಚ್ಚಿಬಿಡಿ. ಅಧಿಕಾರಿಗಳೇ ರಾಜ್ಯಭಾರ ಮಾಡಲಿ, ನಾವು ಸದನಕ್ಕೆ ಏಕೆ ಬರಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ದನಿಗೂಡಿಸಿದ ಜೆಡಿಎಸ್ ಸದಸ್ಯ ಎಂ.ಟಿ.ಕೃಷ್ಣಪ್ಪ, ಸದನದಲ್ಲಿ 224 ಶಾಸಕರಿಗೆ ಮಾಡಿರುವ ಅಪಮಾನ. ಅವರೊಬ್ಬರಿಗೆ ಮಾಡಿರುವ ಅಪಮಾನವಲ್ಲ. ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ವೇಳೆ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ‘ಜನಪ್ರತಿನಿಧಿಗಳನ್ನು ಅವಮಾನಿಸಿದ ಅಧಿಕಾರಿಗಳನ್ನು ರಕ್ಷಣೆ ಮಾಡುವುದಾಗಲೀ, ತಪ್ಪು ಮಾಡಿದವರ ಬಗ್ಗೆ ಸಬೂಬು ಹೇಳುವುದಾಗಲೀ ಮಾಡುವುದಿಲ್ಲ. ಶಾಸಕರಿಬ್ಬರು ಸದನದಲ್ಲಿ ತಮ್ಮ ನೋವನ್ನು ತೋಡಿಕೊಂಡಿದ್ದರು. ಶಾಸಕರು, ಸಂಬಂಧಿಸಿದ ಅಧಿಕಾರಿಗಳು, ಕಂದಾಯ ಸಚಿವರು ಹಾಗೂ ಸಮಿತಿಯ ಅಧ್ಯಕ್ಷ ಸಿ.ಸಿ.ಪಾಟೀಲರನ್ನು ತಮ್ಮ ಕಚೇರಿಗೆ ಕರೆಸಿ ಚರ್ಚೆ ಮಾಡಿ ಮುಂದಿನ ನಿರ್ಣಯ ಕೈಗೊಳ್ಳಬೇಕು’ ಎಂಬ ಸಲಹೆಯನ್ನು ಮಾಡಿದರು.

ಬಳಿಕ ಮಾತನಾಡಿದ ಸ್ಪೀಕರ್ ಖಾದರ್, ‘ರಾಜು ಕಾಗೆ ಹಾಗೂ ಮತ್ತಿಮೋಡ್ ಅವರು ತಮಗಾಗಿರುವ ಅಪಮಾನದ ಬಗ್ಗೆ ಲಿಖಿತವಾಗಿ ಕೊಟ್ಟು ಸದನದಲ್ಲಿ ಪ್ರಸ್ತಾಪಿಸಿದ್ದಾರೆ. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಲಬುರಗಿಯ ಹೆಚ್ಚುವರಿ ಎಸ್ಪಿಯವರಿಂದ ಆದ ಅಪಮಾನವನ್ನು ಪ್ರಸ್ತಾಪಿಸಿದ್ದಾರೆ. ವೇತನ, ಭತ್ಯೆಗಿಂತ ಗೌರವ ಬೇಕು ಎಂಬುದನ್ನು ಜನರು ಅಪೇಕ್ಷೆ ಪಡುತ್ತಾರೆ. ಅನಂತರ ಇತರೆ ಸೌಲಭ್ಯಗಳು’ ಎಂದು ಉಲ್ಲೇಖಿಸಿದರು.

‘ಮಾತನಾಡುವ ಸೌಜನ್ಯ ತೋರದ ಅಧಿಕಾರಿಯ ವರ್ತನೆಯನ್ನು ಸಹಿಸುವುದಿಲ್ಲ. ಜನಪ್ರತಿನಿಧಿಗಳಿಗೆ ಗೌರವ ಕೊಡಬೇಕು. ಇದು ಸದನಕ್ಕೆ ಮಾಡಿರುವ ಅಪಮಾನ. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಬೇರೆಯವರಿಗೂ ಇದು ಎಚ್ಚರಿಕೆ ಗಂಟೆಯಾಗಬೇಕು. ಇದನ್ನು ಹಕ್ಕುಬಾಧ್ಯತಾ ಸಮಿತಿಗೆ ವಹಿಸುತ್ತೇನೆ. ನಾವೇಕೆ ಅಧಿಕಾರಿಗಳಿಗೆ ಸಮಯ ಕೊಡಬೇಕು’ ಎಂದು ಸ್ಪೀಕರ್ ಖಾದರ್ ರೂಲಿಂಗ್ ನೀಡಿದರು.

ಬಳಿಕ ಪ್ರತಿಕ್ರಿಯಿಸಿದ ಕಾನೂನು ಸಚಿವ ಎಚ್.ಕೆ.ಪಾಟೀಲ್, ಸಾಮಾಜಿಕ ನ್ಯಾಯ ಅಧಿಕಾರಿಗಳಿಗೂ ಕೊಡಬೇಕು. ಎಲ್ಲರನ್ನೂ ಕರೆದು ನಿಮ್ಮ ನಿರ್ಣಯವನ್ನು ಪುನರ್ ಪರಿಶೀಲನೆ ಮಾಡಿ ಎಂದು ಸ್ಪೀಕರ್‌ ಗೆ ಮನವಿ ಮಾಡಿದರು. ಇದಕ್ಕೆ ಆಕ್ಷೇಪಿಸಿದ ಸದಸ್ಯರು, ಸ್ಪೀಕರ್ ಖಾದರ್ ಅವರ ನಿರ್ಣಯವನ್ನು ಸ್ವಾಗತಿಸಿದರು. ಆಗ ಸ್ಪೀಕರ್ ಖಾದರ್ ಮಾತನಾಡಿ, ಶಾಸಕರು ಸರಕಾರದ ಪರ ನಿಲ್ಲಬೇಕು. ಹೀಗಾಗಿ ಈ ವಿಚಾರವನ್ನು ಹಕ್ಕು ಬಾಧ್ಯತಾ ಸಮಿತಿಗೆ ವರ್ಗಾಯಿಸಲಾಗುವುದು ಎಂದು ಪ್ರಕಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X