ಉಪರಾಷ್ಟ್ರಪತಿಯನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್
ಹೊಸದಿಲ್ಲಿ: ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಂಗಳವಾರ ಹೊಸದಿಲ್ಲಿಯಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರನ್ನು ಭೇಟಿಯಾದರು.
ತಾವು ಸಭಾಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ ನಂತರ ಸದನವನ್ನು ಕ್ರಿಯಾತ್ಮಕವಾಗಿ ನಡೆಸಲು ತರುತ್ತಿರುವ ಸುಧಾರಣಾ ಕ್ರಮಗಳು ಹಾಗೂ ಶಾಸಕರಿಗೆ ಅಗತ್ಯವಿರುವ ಕೆಲವು ಸೌಲಭ್ಯಗಳನ್ನು ಒದಗಿಸಿರುವುದು ಸೇರಿದಂತೆ ಹಲವು ವಿಷಯಗಳ ಕುರಿತು ಈ ಭೇಟಿ ವೇಳೆ ಪರಸ್ಪರ ವಿಚಾರ ವಿನಿಮಯ ಮಾಡಿಕೊಂಡರು.
Next Story