Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒಂದು ವರ್ಷದೊಳಗೆ 600 ಪಬ್ಲಿಕ್ ಶಾಲೆಗಳ...

ಒಂದು ವರ್ಷದೊಳಗೆ 600 ಪಬ್ಲಿಕ್ ಶಾಲೆಗಳ ಆರಂಭ: ಸಚಿವ ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ10 March 2024 7:37 PM IST
share
ಒಂದು ವರ್ಷದೊಳಗೆ 600 ಪಬ್ಲಿಕ್ ಶಾಲೆಗಳ ಆರಂಭ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಒಂದರಿಂದ 12ನೆ ತರಗತಿಯವರೆಗೆ ಒಂದೇ ಶಾಲೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸುವ ಮೂಲ ಸೌಲಭ್ಯಗಳನ್ನು ಒಳಗೊಂಡ 600 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಮುಂದಿನ ವರ್ಷದ ವೇಳೆಗೆ ರಾಜ್ಯಾದ್ಯಂತ ಪ್ರಾರಂಭಿಸುತ್ತೇವೆ ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.

ರವಿವಾರ ನಗರದ ಬ್ಯಾಟರಾಯನಪುರ ಕ್ಷೇತ್ರ ಕೋಡಿಗೆಹಳ್ಳಿಯ ಬೆಂಗಳೂರು ಪಬ್ಲಿಕ್ ಶಾಲೆಯಲ್ಲಿ ಇಂದು 26 ನೂತನ ಮತ್ತು ಅತ್ಯಾಧುನಿಕ ಶಾಲಾ ಕೊಠಡಿಯನ್ನು ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಸರಕಾರಿ ಶಾಲೆಗಳಲ್ಲಿ ಮೂಲಸೌಲಭ್ಯ ಕಲ್ಪಿಸಿ, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸುವುದು ಸರಕಾರದ ಜವಾಬ್ದಾರಿಯಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರಕಾರ ಶ್ರಮಿಸುತ್ತಿದ್ದು, ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು 20 ಶಾಲೆಗಳ ಪೈಕಿ 2 ಶಾಲೆಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಹಾಗೂ 2 ಶಾಲೆಗಳನ್ನು ನಗರೋತ್ಥಾನ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಬೆಂಗಳೂರು ನಗರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ನಡೆಸಲ್ಪಡುತ್ತಿರುವ 16 ಸರಕಾರಿ ಶಾಲೆಗಳನ್ನು ಮೇಲ್ದರ್ಜೆಗೆ ತರುವ ಯೋಜನೆ ರೂಪುಗೊಂಡಿದೆ. ಮುಂದಿನ ಐದು ವರ್ಷಗಳಲ್ಲಿ ಎರಡು ಗ್ರಾಮಗಳಿಗೆ ಒಂದರಂತೆ ಎರಡು ಸಾವಿರ ಕೆಪಿಎಸ್ ಶಾಲೆಗಳನ್ನು ನಿರ್ಮಿಸುವ ಗುರಿ ಸರಕಾರ ಹೊಂದಿದೆ ಎಂದು ತಿಳಿಸಿದರು.

ಶಾಲಾ ಮಕ್ಕಳಿಗೆ ಬಿಸಿಯೂಟದ ಜತೆಗೆ ವಾರಕ್ಕೆ 2 ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲಾಗುತ್ತಿದೆ, ಮುಂದಿನ ತಿಂಗಳಿಂದ ರಾಗಿ ಮಾಲ್ಟ್ ನೀಡಲಾಗುವುದು. ಶಾಲೆಗಳ ಮೂಲಭೂತ ಸೌಕರ್ಯಗಳಾದ ಕೊಠಡಿಗಳ ನಿರ್ಮಾಣ ಮತ್ತು ನವೀಕರಣ, ಶೌಚಾಲಯ ಸಿದ್ಧತೆ, ಕಾಂಪೌಂಡ್ ಗಳ ನಿರ್ಮಾಣ, ಕುಡಿಯುವ ನೀರಿ ವ್ಯವಸ್ಥೆ, ಗ್ರಂಥಾಲಯ, ವಿಜ್ಞಾನ ಪ್ರಯೋಗಾಲಯ ಹಾಗೂ ಆಟದ ಮೈದಾನ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X