Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಬಜೆಟ್‌ 2024: ವೈದ್ಯಕೀಯ...

ರಾಜ್ಯ ಬಜೆಟ್‌ 2024: ವೈದ್ಯಕೀಯ ಶಿಕ್ಷಣಕ್ಕೆ ನೀಡಿರುವ ಪ್ರಮುಖ ಕೊಡುಗೆಗಳೇನು?: ಇಲ್ಲಿದೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ16 Feb 2024 3:30 PM IST
share
ರಾಜ್ಯ ಬಜೆಟ್‌ 2024: ವೈದ್ಯಕೀಯ ಶಿಕ್ಷಣಕ್ಕೆ ನೀಡಿರುವ ಪ್ರಮುಖ ಕೊಡುಗೆಗಳೇನು?: ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯದಲ್ಲಿಯೂ ವ್ಯಾಪಕ ಬೆಳವಣಿಗೆ ಹೊಂದಿರುವುದರಿಂದ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

► 2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

► ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲಾಗುವುದು.

► ಗದಗ, ಕೊಪ್ಪಳ ಮತ್ತು ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳು ನಿರ್ಮಾಣವಾಗಿದ್ದು, ಈ ಆಸ್ಪತ್ರೆಗಳಿಗೆ ಅವಶ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ.ಗಳನ್ನು ಒದಗಿಸಲಾಗುವುದು.

► ಬೆಂಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ ರೋಬೋಟಿಕ್ ಯಂತ್ರದ ಮೂಲಕ ಉತ್ತಮ ಶಸ್ತ್ರಚಿಕಿತ್ಸೆಯನ್ನು ನೀಡಲು ಕ್ರಮವಹಿಸಲಾಗುವುದು.

► ವೈದ್ಯಕೀಯ ಕಾಲೇಜುಗಳಲ್ಲಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 Modular OT ಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.

► ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Cathlab ಸೌಲಭ್ಯದೊಂದಿಗೆ Super Speciality Cardiac Unit ಅನ್ನು 10 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ Cardiac Unit ಪ್ರಾರಂಭಿಸಲಾಗುವುದು.

► ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವೈದ್ಯಕೀಯ ಸಂಸ್ಥೆಗಳಲ್ಲಿ 64 Anaesthesia Workstation ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಸಲಾಗುವುದು.

► ರಾಜ್ಯದಲ್ಲಿ ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ Human Milk Bank ಘಟಕಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಯಚೂರು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಹೊಸ ಘಟಕಗಳನ್ನು ಸ್ಥಾಪಿಸಲಾಗುವುದು.

► ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗಗಳು ಮತ್ತು ವೈರಲ್ ಸೋಂಕುಗಳನ್ನು ಪತ್ತೆ ಹಚ್ಚಲು Viral Research & Diagnostic Laboratory (VRDL) ಅನ್ನು ಸ್ಥಾಪಿಸಲಾಗುವುದು.

► ಸಾರ್ವಜನಿಕರ ಎಲ್ಲಾ ಆರೋಗ್ಯ ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಸಂಬಂಧ ಡಿಜಿಟಲ್ ಹೆಲ್ತ್ ಸೊಸೈಟಿಯನ್ನು ಆರಂಭಿಸಲು ಈಗಾಗಲೇ ಕ್ರಮವಹಿಸಲಾಗಿರುತ್ತದೆ. ಇದರಡಿಯಲ್ಲಿ ಒಂದು Health Repository ಯನ್ನು ಸೃಜಿಸಿ ಸಾರ್ವಜನಿಕರ ಚಿಕಿತ್ಸಾ ಮಾಹಿತಿಯು ಒಂದೇ ಮೂಲದಿಂದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯರಿಗೆ ಲಭ್ಯವಾಗುವಂತೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡುವುದನ್ನು ಮತ್ತು ಚಿಕಿತ್ಸಾ ಸಮಯವನ್ನು ಸ್ವಯಂಚಾಲಿತವಾಗಿ ನಿಗದಿಪಡಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು.

► ಚಿತ್ರದುರ್ಗ ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು 500 ಕೋಟಿ ರೂ.ಗಳ ವೆಚ್ಚದಲ್ಲಿ 2023-24ನೇ ಸಾಲಿನಿಂದ 150 ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳ ದಾಖಲಾತಿಯೊಂದಿಗೆ ಪ್ರಾರಂಭಿಸಲಾಗಿರುತ್ತದೆ. ವೈದ್ಯಕೀಯ ಕಾಲೇಜಿನ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.

► ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡವನ್ನು ನಿರ್ಮಿಸಲಾಗುವುದು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X