ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ
ಬೆಂಗಳೂರು: ರಾಜ್ಯ ಸರಕಾರವು ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಲೋಕಾಯುಕ್ತ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಅವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿಪಿ ಹಾಗೂ ಗೃಹ ರಕ್ಷಕ ದಳದ ಕಮಾಂಡಂಟ್ ಆಗಿ ವರ್ಗಾವಣೆ ಮಾಡಲಾಗಿದೆ.
ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಎಡಿಜಿಪಿ ಮನೀಶ್ ಖಾರ್ಬಿಕರ್ ಅವರನ್ನು ಲೋಕಾಯುಕ್ತ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಕ್ರಿಫ್ಟೋ ಕರೆನ್ಸಿ ಹಗರಣ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ ಮುಖ್ಯಸ್ಥರ ಹುದ್ದೆಯಲ್ಲಿ ಮುಂದುವರೆಸಿ ಆದೇಶಿಸಲಾಗಿದೆ.
Next Story