9 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರ
ಬೆಂಗಳೂರು: ರಾಜ್ಯ ಸರಕಾರವು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೆ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ 9 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್ ಗದ್ಯಾಳ ಅವರನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿಯಾಗಿ, ಕೆಎಸ್‍ಎಸ್‍ಐಡಿಸಿ ಪ್ರಧಾನ ವ್ಯವಸ್ಥಾಪಕ ರಮೇಶ್ ದೇಸಾಯಿ ಅವರನ್ನು ರಾಜ್ಯ ಆಡಳಿತ ಸುಧಾರಣಾ ಆಯೋಗ-2ರ ವಿಶೇಷ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಸೋಮಲಿಂಗಗೋಪಾಲ ಗೆಣ್ಣೂರು ಅವರನ್ನು ವಿಜಯಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ, ಮಂಡ್ಯ ವಿಶ್ವವಿದ್ಯಾಲಯದ ಕುಲಸಚಿವ ಚಂದ್ರಯ್ಯ ಆರ್. ಅವರನ್ನು ರಾಮನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಎಸ್.ಎಂ.ಶಿವಕುಮಾರ್ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತ(ಆಸ್ತಿಗಳು)ರನ್ನಾಗಿ, ಕಾವ್ಯಾರಾಣಿ ಕೆ.ವಿ. ಅವರನ್ನು ಶಿರಸಿ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ, ಶೋಭಿತಾ ಆರ್. ಅವರನ್ನು ಮಡಿಕೇರಿ-ಮೈಸೂರು ಜಿಲ್ಲೆಯ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಅಪೂರ್ವ ಬಿದರಿ ಅವರನ್ನು ರಾಜ್ಯ ಸಾರ್ವಜನಿಕ ಜಮೀನುಗಳ ನಿಗಮದ ಸಹಾಯಕ ಆಯುಕ್ತರನ್ನಾಗಿ ಹಾಗೂ ನವೀನಾ ಎಚ್.ವಿ. ಅವರನ್ನು ಯಾದಗಿರಿ ಜಿಲ್ಲೆಯ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.