ಕುಟುಂಬದ ವಿಚಾರಗಳನ್ನು ಮಾಧ್ಯಮದಲ್ಲಿ ಎಳೆದುತರುವ ಅಭ್ಯಾಸ ಇಲ್ಲ: ನಟ ದರ್ಶನ್ ಕುರಿತ ಪೋಸ್ಟ್ ಗೆ ಸುಮಲತಾ ಸ್ಪಷ್ಟನೆ
ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ ಎಂದ ಮಾಜಿ ಸಂಸದೆ

ದರ್ಶನ್ / ಸುಮಲತಾ ಅಂಬರೀಶ್
ಬೆಂಗಳೂರು: ‘ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ. ನನ್ನ ಪೋಸ್ಟ್ ಯಾರನ್ನೂ ಉದ್ದೇಶಿಸಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇನೆ. ನಾನು ನನ್ನ ಕುಟುಂಬ ಹಾಗೂ ಆಪ್ತರ ವಿಚಾರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಎಳೆದು ತರುವ ಅಭ್ಯಾಸವನ್ನು ಎಂದಿಗೂ ಹೊಂದಿಲ್ಲ’ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್, ನಟ ದರ್ಶನ್ ಕುರಿತ ತಮ್ಮ ಎಕ್ಸ್ ನಲ್ಲಿ ಹಾಕಿದ್ದ ಪೋಸ್ಟ್ ಗೆ ಸ್ಪಷ್ಟಣೆ ನೀಡಿದ್ದಾರೆ.
ಬುಧವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ನನ್ನ ಹಿಂದಿನ ಒಂದು ಪೋಸ್ಟ್ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಸ್ಪಷ್ಟನೆ ನೀಡಲು ನಾನು ಇಚ್ಛಿಸುತ್ತೇನೆ. ನನ್ನ ಪೋಸ್ಟ್ ಯಾರನ್ನಾದರೂ ಗುರಿಯಾಗಿಸಿ ಮಾಡಲಾದದ್ದಲ್ಲ, ಅದು ಸರಳವಾಗಿ ಹಂಚಿಕೊಂಡ ವಿಷಯ ಮಾತ್ರ ಎಂದು ವಿವರಣೆ ನೀಡಿದ್ದಾರೆ.
‘ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್ಫಾಲೋ ಮಾಡುತ್ತಾರೆಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ. ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ಸುದ್ದಿಗಳು ಬಂದ ಬಳಿಕವೇ ನನಗೂ ಈ ಬೆಳವಣಿಗೆ ತಿಳಿಯಿತು. ನಿಜಕ್ಕೂ ನಟ ದರ್ಶನ್ ಇನ್ಸ್ಟಾಗ್ರಾಂ ಮತ್ತು ಟ್ವಿಟರ್ ನಲ್ಲಿ ಯಾರನ್ನೂ ಫಾಲೋ ಮಾಡುತ್ತಿಲ್ಲ. ಇದು ಅವರ ವೈಯಕ್ತಿಕ ಆಯ್ಕೆ, ಮತ್ತು ಅದನ್ನು ಎಲ್ಲರೂ ಗೌರವಿಸಬೇಕು. ಇದನ್ನು ಬೇರೆ ರೀತಿಯಲ್ಲಿ ಅರ್ಥೈಸುವುದು ಅಗತ್ಯವಿಲ್ಲ ಎಂದು ಅವರು ಮನವಿ ಮಾಡಿದ್ದಾರೆ.
ನನ್ನ ಹಿಂದಿನ ಒಂದು ಪೋಸ್ಟ್ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಸ್ಪಷ್ಟನೆ ನೀಡಲು ನಾನು ಇಚ್ಛಿಸುತ್ತೇನೆ. ನನ್ನ ಪೋಸ್ಟ್ ಯಾರನ್ನಾದರೂ ಗುರಿಯಾಗಿಸಿ ಮಾಡಲಾದದ್ದಲ್ಲ; ಅದು ಸರಳವಾಗಿ ಹಂಚಿಕೊಂಡ ವಿಷಯ ಮಾತ್ರ.
— Sumalatha Ambareesh ಸುಮಲತಾ ಅಂಬರೀಶ್ (@sumalathaA) March 12, 2025
ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ.…