ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾದ ಸುನಿಲ್ ಕುಮಾರ್; ವರದಿ

ಸುನೀಲ್ ಕುಮಾರ್
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟದ ನಡುವೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಸಂಬಂಧ ಸ್ವತಃ ವಿ. ಸುನೀಲ್ ಕುಮಾರ್ ಅವರೇ ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸುವಂತೆ ಹೈಕಮಾಂಡ್ಗೆ ಮೌಖಿಕವಾಗಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಬಣಗಳ ನಡುವಿನ ವಿರಸ ಹೆಚ್ಚಾಗಿದ್ದು, ನಾಯಕರುಗಳು ತಮ್ಮ ತಮ್ಮಲ್ಲೇ ವಾಗ್ದಾಳಿ ಮುಂದುವರಿಸಿದ್ದಾರೆ. ಈ ಮಧ್ಯ ಪಕ್ಷದಲ್ಲಿ ಇಂತಹದ್ದೊಂದು ಬೆಳವಣಿಗೆ ನಡೆದಿದೆ.
ಈ ಹಿಂದೆ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷ ಹುದ್ದೆಯಿಂದ ಇಳಿದ ಬಳಿಕ ಹೈಕಮಾಂಡ್ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿತ್ತು. ಅದರಂತೆ ಸುನಿಲ್ ಕುಮಾರ್ಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿದ್ದರು. ಆದರೆ ಸುನಿಲ್ ಕುಮಾರ್ ಅವರು ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೊರೆಯಲು ಮುಂದಾಗಿದೆ ಎನ್ನಲಾಗಿದೆ.