‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ’ ಕುರಿತು ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ(ಜಾತಿ ಜನಗಣತಿ)ವರದಿಯಲ್ಲಿನ ಶಿಫಾರಸ್ಸುಗಳ ಕುರಿತು ಮುಂದಿನ ಗುರುವಾರ (ಎ.17) ಸಂಜೆ 4 ಗಂಟೆಗೆ ನಡೆಯಲಿರುವ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶುಕ್ರವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷಾ ವರದಿಯನ್ನು ಇಂದು ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಲಾಯಿತು. ಕೆಲವು ಮಂತ್ರಿಗಳು ವರದಿಯಲ್ಲಿನ ಶಿಫಾರಸ್ಸುಗಳನ್ನು ನೋಡಬೇಕೆಂದು ಹೇಳಿದರು ಎಂದರು.
ಆದುದರಿಂದ, ಮುಂದಿನ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಆ ವರದಿಯಲ್ಲಿ ಶಿಫಾರಸ್ಸುಗಳ ಬಗ್ಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.
Next Story