ಶಾಸಕರ ಅಮಾನತು; ಕಲಾಪ ಬಹಿಷ್ಕರಿಸಿ ಶುಕ್ರವಾರವೂ ಬಿಜೆಪಿ ಪ್ರತಿಭಟನೆ
ಬೆಂಗಳೂರು: ವಿಧಾನಸಭೆಯಿಂದ ಬಿಜೆಪಿಯ ಶಾಸಕರ ಅಮಾನತು ಖಂಡಿಸಿ ವಿಧಾನ ಸಭೆ, ಪರಿಷತ್ ಕಲಾಪ ಬಹಿಷ್ಕರಿಸಿದ ಬಿಜೆಪಿ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಶುಕ್ರವಾರ ಕೂಡ ಪ್ರತಿಭಟನೆ ಮುಂದುವರಿಸಿದ್ದಾರೆ.
ಈ ವೇಳೆ ಮಾತನಾಡಿದ ಮಾಜಿ ಗೃಹಸಚಿವ ಅರಗ ಜ್ಞಾನೇಂದ್ರ, ''ಇತಿಹಾಸದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷವಿಲ್ಲದೇ ಬಜೆಟ್ ಬಿಲ್ ಪಾಸ್ ಮಾಡಿದ್ದಾರೆ. ಸಿದ್ದರಾಮಯ್ಯರದ್ದು ಸರ್ವಾಧಿಕಾರಿ ಧೋರಣೆ'' ಎಂದು ಆಕ್ರೋಶ ವ್ಯಕ್ತಪಡಿಸಿದರು.
''ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಬಿಲದಲ್ಲಿದ್ದವರು ಈಗ ಹೊರಗೆ ಬರುತ್ತಿದ್ದಾರೆ. ಸ್ಪೀಕರ್ ವಿರುದ್ಧ ದೂರು ಕೊಟ್ಟಿದ್ದೇವೆ. ಹೋರಾಟ ಮುಂದುವರಿಸುತ್ತೇವೆ'' ಎಂದು ಅವರು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಆರ್.ಅಶೋಕ್, ಸುರೇಶ್ ಕುಮಾರ್, ಶಾಸಕರು, ಪರಿಷತ್ ಸದಸ್ಯರು ಪಾಲ್ಗೊಂಡಿದ್ದಾರೆ.
Next Story