ರಾಜ್ಯದಲ್ಲಿ ತಾಪಮಾನ ಏರಿಕೆ, ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ದಾಖಲು
ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 41.6 ಡಿಗ್ರಿ ಸೆಲ್ಸಿಯಸ್‍ಗೆ ತಲುಪಿದೆ. ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಮಾನ ಇಲಾಖೆಯು ಮಂಗಳವಾರದಂದು ಮಾಹಿತಿ ಪ್ರಕಟಿಸಿದೆ.
ಎ.2ರಂದು ಕಲಬುರಗಿ ಜಿಲ್ಲೆಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 20.4 ಡಿಗ್ರಿ ಸೆಲ್ಸಿಯಲ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ 35.1 ಡಿಗ್ರಿ ಸೆಲ್ಸಿಯಸ್, ಮಂಗಳೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್, ಮೈಸೂರಿನಲ್ಲಿ 36.7 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗದಲ್ಲಿ 37.6 ಡಿಗ್ರಿ ಸೆಲ್ಸಿಯಸ್, ರಾಯಚೂರು 39.6 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ 39.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.
Next Story