ಕರ್ನಾಟಕದ ಬರ ಪರಿಸ್ಥಿತಿ ಕೇಂದ್ರಕ್ಕೆ ಮನವರಿಕೆ ಮಾಡಬೇಕು: ನಟ ಸುದೀಪ್
ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ ನಟ
ಬೆಂಗಳೂರು: ʼʼಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನೆಡೆಸುತ್ತಿದ್ದಾರೆ. ಕನ್ನಡ ದ ನೆಲ ಜಲ ಭಾಷೆ ಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆʼʼ ಎಂದು ನಟ ಸುದೀಪ್ ಬೆಂಬಲ ಸೂಚಿಸಿದ್ದಾರೆ.
ಈ ಸಂಬಂಧ ಮಂಗಳವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಮುಂಗಾರುಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಂತ್ರಜ್ಞ ರು ಕೂಡಲೇ ಟ್ರಬಿನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿ ಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆʼʼ ಎಂದು ಹೇಳಿದ್ದಾರೆ.
ʼʼಹಿಂದಿನ ಕೆಲವು ಮುಖ್ಯಮಂತ್ರಿ ಗಳಂತೆಯೇ ನಮ್ಮ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ನವರು ತಮಿಳುನಾಡಿನ ಮುಖ್ಯ ಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆ ಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕ ವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ. ಸದ್ಯದ ಬರ -ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕರ್ನಾಟಕ ದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ ಆದರೆ ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ.ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿʼʼ ಎಂದು ಹಾರೈಸಿದ್ದಾರೆ.
ʼʼಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ -ಮಹದಾಯಿ ನದಿ ಮತ್ತು ಕಳ ಸಾ ಬಂಡೂರಿ ವಿವಾದಗಳು ಬಗೆ ಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ. ನಮ್ಮ ಜಲ ನಮ್ಮ ಹಕ್ಕುʼʼ ಎಂದು ನಟ ಸುದೀಪ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.