Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಡಾ ಪ್ರಕರಣ | ನಿವೇಶನಗಳನ್ನು...

ಮುಡಾ ಪ್ರಕರಣ | ನಿವೇಶನಗಳನ್ನು ಹಿಂದಿರುಗಿಸುತ್ತೇನೆ : ಮುಡಾ ಆಯುಕ್ತರಿಗೆ ಪತ್ರ ಬರೆದ ಸಿಎಂ ಪತ್ನಿ ಪಾರ್ವತಿ

ವಾರ್ತಾಭಾರತಿವಾರ್ತಾಭಾರತಿ30 Sept 2024 10:48 PM IST
share
ಮುಡಾ ಪ್ರಕರಣ | ನಿವೇಶನಗಳನ್ನು ಹಿಂದಿರುಗಿಸುತ್ತೇನೆ : ಮುಡಾ ಆಯುಕ್ತರಿಗೆ ಪತ್ರ ಬರೆದ ಸಿಎಂ ಪತ್ನಿ ಪಾರ್ವತಿ

ಮೈಸೂರು : ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ಮುಡಾದಿಂದ ಪಡೆದಿದರುವ 14 ನಿವೇಶನಗಳನ್ನು ಹಿಂದಿರುಗಿಸುತ್ತಿರುವುದಾಗಿ ಮುಡಾ ಆಯಕ್ತರಿಗೆ ಪತ್ರ ಬರೆದಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿಯವರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

50:50 ಅನುಪಾತದಲ್ಲಿ ಮೈಸೂರಿನ ವಿಜಯನಗರದಲ್ಲಿ ಸಿಎಂ ಪತ್ನಿ ಪಾರ್ವತಿಯವರು 14 ನಿವೇಶನಗಳನ್ನು ಪಡೆದಿದ್ದರು.

ಪಾವರ್ತಿಯವರು ಬರೆದಿರುವ ಪತ್ರದಲ್ಲೇನಿದೆ?

ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೇ ನಂ.464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿರುವುದು ನಿಮಗೆ ತಿಳಿದಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ʼಮುಡಾʼ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ :

ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು.

ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು.

ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು. ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ - ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ.

ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ.

ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ.

ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ. ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಪತ್ನಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X