ಕಲ್ಯಾಣ ಕರ್ನಾಟಕ ಅಭಿವೃದ್ದಿಗೆ ಸರ್ಕಾರ ಬದ್ಧ- ಸಚಿವ ಡಾ ಎಂ.ಸಿ. ಸುಧಾಕರ
ಕಲಬುರಗಿ: ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ದಿಗೆ ಬದ್ಧವಾಗಿದ್ದು ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ ಎಂ ಸಿ ಸುಧಾಕರ ಹೇಳಿದರು.
ಆಳಂದ ಪಟ್ಟಣದಲ್ಲಿ ನಡೆದ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡ ಅಂದಾಜು ಮೊತ್ತ ರೂ 800 ಲಕ್ಷ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಂದಾಜು ಮೊತ್ತ ರೂ 625.95 ಲಕ್ಷ ಕಟ್ಟಡದ ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಸಿಎಂ ಸಿದ್ದರಾಮಯ್ಯ ನವರು 25 ನೂತನ ಪಾಲಿಟೆಕ್ನಿಕ್ ಕಾಲೇಜುಗಳನ್ನು ಘೋಷಿಸಿದ್ದರು.ಪರಿಣಾಮವಾಗಿ ಆಳಂದ್ ಪಟ್ಟಣದಲ್ಲಿ ಅಂದಾಜು 8 ಕೋಟಿ ವೆಚ್ಚದಲ್ಲಿ ನೂತನ ಕಾಲೇಜು ಮಂಜೂರಾಗಿದೆ. ಇದು ಈ ಭಾಗದ ಬಡ ಮದ್ಯಮ ವರ್ಗದ ಕುಟುಂಬದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಶಾಸಕ ಬಿ.ಆರ್ ಪಾಟೀಲ್ ಅವರ ಅವಿರತ ಶ್ರಮ ಇದರ ಹಿಂದೆ ಇದೆ ಎಂದರು.
ಕ.ಕ ಭಾಗದ ಅಭಿವೃದ್ದಿಗೆ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಸತತ ಪ್ರಯತ್ನಪಟ್ಟಿದ್ದಾರೆ. ಜೊತೆಗೆ ಶಾಸಕರಾದ ಬಿ.ಆರ್.ಪಾಟೀಲ್ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಈ ಭಾಗದ ಅಭಿವೃದ್ದಿಗೆ ಕ್ರಮ ಕೈಗೊಳ್ಳಲಿದ್ದೇವೆ ಎಂದರು.