ಜುಲೈ 10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಪ್ರಾರಂಭ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: 'ಬಿಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಬದಲು ಹಣ ನೀಡುವ ಪ್ರಕ್ರಿಯೆ ಜುಲೈ 10ರಿಂದ ಶುರುವಾಗುತ್ತೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಜುಲೈನಲ್ಲಿ ಅಕ್ಕಿ ಬದಲು ಹಣ ಕೊಡ್ತೇವೆ ಅಂತಾ ಹೇಳಿದ್ದೆವು. ಆದರೆ ಜುಲೈ 1ರಂದೇ ಹಣ ಕೊಡುತ್ತೇವೆ ಅಂತಾ ಹೇಳಿಲ್ಲ. ಈ ತಿಂಗಳಿನಿಂದಲೇ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಜಾರಿ ಮಾಡಿದ್ದೇವೆ'' ಎಂದರು.
'ಗೃಹಜ್ಯೋತಿ ಯೋಜನೆ ಈ ತಿಂಗಳಿನಿಂದ ಉಚಿತವಾಗಲಿದೆ. ಆಗಸ್ಟ್ ನ ಬಿಲ್ ಉಚಿತವಾಗಿರಲಿದೆ' ಎಂದು ಸ್ಪಷ್ಟಪಡಿಸಿದರು.
Next Story