ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ
ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು, ಇಂಜಿನಿಯರ್ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು ಹಾಗೂ ಕಿರಿಯ ತಾಂತ್ರಿಕ ಶಾಲೆಗಳ ಅತಿಥಿ ಉಪನ್ಯಾಸಕರ ಮಾಸಿಕ ಗೌರವಧನ ಹೆಚ್ಚಳ ಮಾಡಲಾಗಿದ್ದು, ಜ.1ರಿಂದ ಜಾರಿ ಬರುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸೇವಾ ಅವಧಿಯ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಗೌರವಧನವನ್ನು 5ಸಾವಿರ ರೂ.ಗಳಿಂದ 8 ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿದೆ. 60 ವರ್ಷ ಮೀರಿದ ಅತಿಥಿ ಉಪನ್ಯಾಸಕರಿಗೆ ಭದ್ರತಾ ರೂಪದಲ್ಲಿ ವಾರ್ಷಿಕ 50 ಸಾವಿರ ರೂ.ಗಳಂತೆ 5 ಲಕ್ಷ ರೂ.ಗಳ ಮೊತ್ತದ ಇಡಿಗಂಟಿನ ಸೌಲಭ್ಯವನ್ನು ನೀಡಲು ಮಂಜೂರಾತಿ ಮಾಡಲಾಗಿದೆ.
ಅತಿಥಿ ಉಪನ್ಯಾಸಕರ ಆರೋಗ್ಯ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ.ಗಳ ಆರೋಗ್ಯ ವಿಮಾ ಸೌಲಭ್ಯವನ್ನು ನೀಡುವ ನಿಟ್ಟಿನಲ್ಲಿ ಆರೋಗ್ಯ ವಿಮಾ ಸೌಲಭ್ಯವನ್ನು ಅನುಷ್ಠಾನಗೊಳಿಸಲು ಮಂಜೂರು ಮಾಡಲಾಗಿದೆ.
Next Story