Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ...

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಹೊಸ ಆಲೋಚನೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್

"ಮಂಗಳೂರಿನಲ್ಲಿ ಧರ್ಮ ರಾಜಕೀಯ ಇದೆ, ಬಿಜೆಪಿ ಇಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ"

ವಾರ್ತಾಭಾರತಿವಾರ್ತಾಭಾರತಿ17 Feb 2024 12:35 PM IST
share
ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಹೊಸ ಆಲೋಚನೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್

ಮಂಗಳೂರು : " ಮಂಗಳೂರಿನಲ್ಲಿ ಧರ್ಮ ರಾಜಕೀಯ ಇದೆ. ಬಿಜೆಪಿ ಇಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ. ಈ ಜಿಲ್ಲೆಯ ಬಗ್ಗೆ ನಾವು ಹೊಸ ಅಲೋಚನೆ ಮಾಡುತ್ತೇವೆ, ಉದ್ಯೋಗ ಸೃಷ್ಟಿಸುತ್ತೇವೆ" ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು.

ಕಾರ್ಯಕರ್ತರ ಸಮಾವೇಶವನ್ನು ಮಂಗಳೂರಿನಲ್ಲೇ ನಡೆಸಲು ತೀರ್ಮಾನ ಮಾಡಿರುವುದೇಕೆ ಎಂದು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ ಅವರು, “ರಾಜಕೀಯದಲ್ಲಿ ಯಾವುದೂ ಶಾಶ್ವತವಿಲ್ಲ. ಅಸಾಧ್ಯ ಎಂಬುದಿಲ್ಲ. ರಾಜಕಾರಣ ಎಂದರೆ ಸಾಧ್ಯತೆಗಳ ಕಲೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜನ ಇಲ್ಲಿ ಬದಲಾವಣೆ ಮಾಡಲಿದ್ದಾರೆ ಎಂಬ ನಂಬಿಕೆ ಇದೆ. ಈ ಭಾಗದಲ್ಲಿ ನಿರುದ್ಯೋಗದ ಸಮಸ್ಯೆ ಇದೆ. ಇಲ್ಲಿ ಪಾಸಾಗುವ ಯುವಕರು ಮತ್ತು ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಬೆಂಗಳೂರು, ಮುಂಬೈ, ಸೌದಿಗೆ ಹೋಗುತ್ತಿದ್ದಾರೆ ಎಂದರು.

ಈ ಭಾಗದಲ್ಲಿ ಶಾಂತಿ ಕದಡಲಾಗುತ್ತಿದೆ. ಈ ಭಾಗದಲ್ಲಿ ಅನೇಕ ಮೆಡಿಕಲ್, ಇಂಜಿನಿಯರ್ ಕಾಲೇಜುಗಳಿವೆ. ಅನೇಕ ಮಕ್ಕಳು ಇಲ್ಲಿ ಬಿಜೆಪಿಯ ಧರ್ಮದ ಬಲೆಗೆ ಬಿದ್ದು ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ. ಬಿಜೆಪಿ ಅಭಿವೃದ್ಧಿ ವಿಚಾರ ಬಿಟ್ಟು ಭಾವನಾತ್ಮಕ ವಿಚಾರವನ್ನು ಮುಂದಿಡುತ್ತಿದೆ. ಅದಕ್ಕಾಗಿ ನಾವು ನಮ್ಮ ಪ್ರಣಾಳಿಕೆಯಲ್ಲಿ ಹೊಸ ಆಲೋಚನೆ ಮಾಡುವುದಾಗಿ ಹೇಳಿದ್ದೆವು. ನಿನ್ನೆಯ ಬಜೆಟ್ ನಲ್ಲೂ ಮೀನುಗಾರರು ಹಾಗೂ ಕರಾವಳಿ ಭಾಗದಲ್ಲಿ ಹೊಸ ನೀತಿ ತರಲು ಘೋಷಣೆ ಮಾಡಿದ್ದೇವೆ. ಈ ವಿಚಾರವಾಗಿ ಸಲಹೆ ಕೇಳಲಾಗಿದೆ. ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಬೇಕಾಗಿದೆ. ಸಂಜೆ 7 ಗಂಟೆ ನಂತರ ಈ ಭಾಗದ ಪ್ರದೇಶದಲ್ಲಿ ಜನ ಓಡಾಟ ಕಡಿಮೆ ಮಾಡಿದ್ದಾರೆ. ವ್ಯಾಪಾರ ವಹಿವಾಟು ಕುಂಠಿತವಾಗಿದೆ. ವ್ಯಾಪಾರ ವಹಿವಾಟು ಆದಾಗಲೇ ಜನಕ್ಕೆ ಉದ್ಯೋಗ ಸಿಗುತ್ತದೆ ಎಂದು ತಿಳಿಸಿದರು.

ದೇವಾಲಯಗಳಲ್ಲಿ ಇರುವ ಭಕ್ತಿ ವ್ಯಾಪಾರ ವಹಿವಾಟಿನಲ್ಲೂ ಇರಬೇಕು. ಇನ್ನು ಈ ಭಾಗದ ಬ್ಯಾಂಕುಗಳನ್ನು ಉತ್ತರ ಭಾರತದ ಬ್ಯಾಂಕುಗಳ ಜತೆ ವಿಲೀನ ಮಾಡಲಾಗುತ್ತಿದೆ. ಇಲ್ಲದರ ಬಗ್ಗೆ ನಾವು ಗಂಭೀರವಾಗಿ ಗಮನಹರಿಸಬೇಕು. ಇಂದಿನ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿಗಳು, ಪ್ರಧಾನ ಕಾರ್ಯದರ್ಶಿಗಳು, ಮಂತ್ರಿಗಳು ಸೇರಿದಂತೆ ಅನೇಕ ನಾಯಕರು ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡಲ್ಲ:

ಜೊರೋಸಾ ಶಾಲೆ ವಿಚಾರದಲ್ಲಿ ಶಾಸಕರ ವಿರುದ್ಧದ ಪ್ರಕರಣ ಹಿಂಪಡೆಯದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂಬ ಬಿಜೆಪಿ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಮಾಡುತ್ತಿರಲಿ. ಕಾನೂನಿನ ಪ್ರಕಾರ ಕ್ರಮ ವಹಿಸಲಾಗುತ್ತದೆ. ಪೊಲೀಸರು ಅವರ ಕೆಲಸ ಮಾಡುತ್ತಾರೆ. ನಾನು ಅವರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ತಿಳಿಸಿದರು.

ಮುಸಲ್ಮಾನರಿಗೆ ಶೇ.1ರಷ್ಟು ಅನುದಾನ ನೀಡಬಾರದೇ?

ಬಜೆಟ್ ನಲ್ಲಿ ಶೇ.1 ರಷ್ಟು ಅನುದಾನ ನೀಡಬಾರದೇ? ಬಿಜೆಪಿಯವರು ರಾಜಕಾರಣ ಮಾಡಲಿಕ್ಕೆ ಈ ರೀತಿ ಹೇಳುತ್ತಾರೆ” ಎಂದರು.

ದಿಲ್ಲಿಯಲ್ಲಿ ಕೂರುವ ಎಂಪಿ ಅಲ್ಲ, ಹಳ್ಳಿಯ ಸಂಸದ

ಎಚ್​.ಡಿ ಕುಮಾರಸ್ವಾಮಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸದ ಡಿಕೆ ಸುರೇಶ್ ವಿರುದ್ಧವೇ ಸ್ಪರ್ಧಿಸಿದರೆ ಬೇಸರವಿಲ್ಲ . ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ, ಕುಮಾರಸ್ವಾಮಿ ವಿರುದ್ಧವೇ ಸ್ಪರ್ಧಿಸಿದ್ದವನು ನಾನು. ನನ್ನ ಸಹೋದರನ ವಿರುದ್ಧ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೂ ಆತನೇ ಗೆದ್ದಿದ್ದಾನೆ. ಬಿಜೆಪಿ, ಜೆಡಿಎಸ್ ನನ್ನ ಸಹೋದರನ ವಿರುದ್ಧ ಸ್ಪರ್ಧಿಸಿದ್ದಾಗಲೂ ಗೆದ್ದಿದ್ದಾನೆ. ಸುರೇಶ್ ದಿಲ್ಲಿಯಲ್ಲಿ ಕೂರುವ ಎಂಪಿ ಅಲ್ಲ, ಹಳ್ಳಿಯ ಸಂಸದ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X