ಹುಲಿ ಉಗುರು ಪ್ರಕರಣ: ಆರೋಪಿ ವರ್ತೂರು ಸಂತೋಷ್ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್
ಸಂತೋಷ್
ಬೆಂಗಳೂರು, ಅ.26: ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪದಡಿ ಕನ್ನಡದ ʼಬಿಗ್ ಬಾಸ್ʼ ರಿಯಾರಿಟಿ ಶೋ ಮನೆಯಿಂದಲೇ ಅರಣ್ಯಾಧಿಕಾರಿಗಳಿಂದ ಬಂಧಿತನಾಗಿದ್ದ ಸ್ಪರ್ಧಿ ವರ್ತೂರು ಸಂತೋಷ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ 2ನೆ ಎಸಿಜೆಎಂ ನ್ಯಾಯಾಲಯವು ಶುಕ್ರವಾರಕ್ಕೆ ಆದೇಶವನ್ನು ಕಾಯ್ದಿರಿಸಿದೆ.
ಸಂತೋಷ್ ಪರ ವಕೀಲ ನಟರಾಜ್ ಹಾಗೂ ಸರಕಾರಿ ಅಭಿಯೋಜಕರು ನ್ಯಾಯಾಲಯದ ಮುಂದೆ ವಿಚಾರಣೆ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಯ ಆದೇಶವನ್ನು ಅ.27ಕ್ಕೆ ಕಾಯ್ದಿರಿಸಿದರು.
ಹುಲಿ ಉಗುರು ಪೆಂಡೆಂಟ್ ಹೊಂದಿರುವ ದೂರು ಬಂದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಸಂತೋಷ್ ನನ್ನು ಬಂಧಿಸಿದ್ದರು. ಈ ವೇಳೆ ಸಂತೋಷ್ ಧರಿಸಿದ ಹುಲಿ ಉಗುರನ್ನು ವಶಕ್ಕೆ ಪಡೆದುಕೊಂಡಿದ್ದರು. ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಂಧನವಾಗುತ್ತಿದ್ದಂತೆ ಜಾಮೀನು ಕೋರಿ ಸಂತೋಷ್ ಅರ್ಜಿ ಸಲ್ಲಿಸಿದ್ದರು.
Next Story