ಟಿಪ್ಪು ಜಯಂತಿ | ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ
ಮಂಡ್ಯ, .ನ.10: ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು (ಶುಕ್ರವಾರ) ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
'ಟಿಪ್ಪು ಜಯಂತಿ ಆಚರಣೆ ಹೆಸರಿನಲ್ಲಿ ಶ್ರೀರಂಗಪಟ್ಟಣದಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ , ಯಾವುದೇ ಘೋಷಣೆ ಕೂಗದಂತೆ, ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ ಸಿಡಿಸದಂತೆ ಆದೇಶದಲ್ಲಿ ತಿಳಿಸಲಾಗಿದೆ. ಇಂದು ಬೆಳಗ್ಗೆ 6ರಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ರಾತ್ರಿ 11 ಗಂಟೆವರೆಗೆ ಇರಲಿದೆ' ಎಂದು ತಾಲೂಕು ಆಡಳಿತ ತಿಳಿಸಿದೆ.
'ಟಿಪ್ಪು ವಕ್ಫ್ ಎಸ್ಟೇಟ್' ಇಂದು ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ, ಶ್ರೀರಂಗಪಟ್ಟಣದ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಇಂದು ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
Next Story