ನಾಳೆ (ಜು.26) ಕೊಡಗು ಜಿಲ್ಲಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ
ಸಾಂದರ್ಭಿಕ ಚಿತ್ರ
ಕೊಡಗು, ಜು.25: ಜಿಲ್ಲಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜು.26 ರಂದು ಕೂಡಾ ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಆದರೆ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಿಗೆ ಜು.26ರಂದು ರಜೆ ಇರುವುದಿಲ್ಲ ಎಂದು ಅವರು ಪ್ರಕಟನೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ 3, 4 ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
Next Story